ಮಂಗಳೂರು : ಬಂಟ್ವಾಳದಲ್ಲಿ ನಡೆದ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮೈಸೂರಿನ ಕೋಕಾ (KOKA) ವಿಶೇಷ ನ್ಯಾಯಾಲಯವು ಭರತ್ ಕುಮ್ದೇಲ್ ಸೇರಿದಂತೆ ಒಟ್ಟು ಎಂಟು ಮಂದಿಗೆ ಜಾಮೀನು ಮಂಜೂರು ಮಾಡಿ ಆದೇಶಿಸಿತ್ತು. ಆದರೆ, ನ್ಯಾಯಾಲಯದಿಂದ ಜಾಮೀನು ಲಭಿಸಿದ ಕೆಲವೇ ಕ್ಷಣಗಳಲ್ಲಿ ಭರತ್, ಶಿವಪ್ರಸಾದ್, ಪ್ರದೀಪ್, ರಂಜಿತ್, ಅಭಿನ್ ಹಾಗೂ ತೇಜಕ್ಷಾ ಅವರ ವಿರುದ್ಧ ಗೂಂಡಾ ಕಾಯ್ದೆಯನ್ನು ಜಾರಿಗೊಳಿಸಿ, ಅವರನ್ನು ಮತ್ತೆ ಜೈಲಿಗೆ ಕಳುಹಿಸಲಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ವೆಲ್ ಹೇಳಿದ್ದಾರೆ.
ನ್ಯಾಯಾಲಯದ ತೀರ್ಪನ್ನು ಗೌರವಿಸದೆ, ಹಿಂದೂ ಕಾರ್ಯಕರ್ತರ ಧ್ವನಿಯನ್ನು ಹತ್ತಿಕ್ಕಲು ಮತ್ತು ಅಲ್ಪಸಂಖ್ಯಾತರ ತುಷ್ಟಿಕರಣ ರಾಜಕೀಯಕ್ಕಾಗಿ ರಾಜ್ಯ ಸರ್ಕಾರವು ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಸರ್ಕಾರದ ಈ ರೀತಿಯ ಕ್ರಮಗಳ ವಿರುದ್ಧ ಕರಾವಳಿಯ ಹಾಗೂ ತುಳುನಾಡಿನ ಜನರು ಜಾಗೃತರಾಗಬೇಕಿದ್ದು, ಸರ್ಕಾರದ ಹಿಂದೂ ವಿರೋಧಿ ನೀತಿ ಮತ್ತು ದೌರ್ಜನ್ಯಗಳ ವಿರುದ್ಧ ಬೃಹತ್ ಜನಾಂದೋಲನ ರೂಪಿಸಲು ವಿಶ್ವ ಹಿಂದೂ ಪರಿಷತ್ ತೀರ್ಮಾನಿಸಿದೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









