ಮಂಗಳೂರು : ನಗರದ ಹೊರವಲಯದ ಪಡೀಲ್ನಲ್ಲಿರುವ ಪ್ರಸಿದ್ಧ ಕಾರು ಶೋರೂಂವೊಂದರಲ್ಲಿ ಶುಕ್ರವಾರ ರಾತ್ರಿ ಆಕಸ್ಮಿಕವಾಗಿ ಅಗ್ನಿ ಅವಘಡ ಸಂಭವಿಸಿದ್ದು, ಸ್ಥಳದಲ್ಲಿದ್ದ ಕಾರುಗಳು ಬೆಂಕಿಯ ಜ್ವಾಲೆಗೆ ಸಿಲುಕಿ ಹಾನಿಗೊಳಗಾಗಿವೆ. ರಾತ್ರಿ ಸುಮಾರು 8 ಗಂಟೆಯ ವೇಳೆಗೆ ಶೋರೂಂ ಆವರಣದಿಂದ ಏಕಾಏಕಿ ದಟ್ಟವಾದ ಹೊಗೆಯ ಮೋಡಗಳು ಹೊರಹೊಮ್ಮಲು ಪ್ರಾರಂಭವಾಗಿದ್ದು, ಕ್ಷಣಮಾತ್ರದಲ್ಲಿ ಕಟ್ಟಡದಾದ್ಯಂತ ಬೆಂಕಿ ವ್ಯಾಪಿಸಿದೆ.
ಶೋರೂಂ ಒಳಗಿನಿಂದ ಹೊಗೆಯ ಜ್ವಾಲೆ ಹೆಚ್ಚಾಗುತ್ತಿದ್ದಂತೆಯೇ ಆತಂಕಗೊಂಡ ಸ್ಥಳೀಯರು ತಕ್ಷಣವೇ ಅಗ್ನಿಶಾಮಕ ದಳಕ್ಕೆ ಮಾಹಿತಿ ರವಾನಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ಕೈಗೊಂಡು, ಸತತ ಪ್ರಯತ್ನದ ಬಳಿಕ ಬೆಂಕಿಯನ್ನು ಸಂಪೂರ್ಣವಾಗಿ ಹತೋಟಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಈ ಘಟನೆಯಿಂದಾಗಿ ಶೋರೂಂನಲ್ಲಿದ್ದ ವಾಹನಗಳಿಗೆ ಹಾನಿಯುಂಟಾಗಿದ್ದು, ಉಂಟಾಗಿರುವ ಒಟ್ಟು ಆಸ್ತಿಪಾಸ್ತಿ ನಷ್ಟದ ನಿಖರ ಮೌಲ್ಯವನ್ನು ಅಧಿಕಾರಿಗಳು ಅಂದಾಜಿಸುತ್ತಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









