ಮಂಗಳೂರು : ನಗರದ ಕರಂಗಲಪಾಡಿ ಕೋರ್ಟ್ ರಸ್ತೆಯ ಇಳಿಜಾರು ಪ್ರದೇಶದಲ್ಲಿ ಮಂಗಳವಾರ ಬೆಳಿಗ್ಗೆ ಗೂಡ್ಸ್ ಆಟೋ, ಕಾರು ಮತ್ತು ದ್ವಿಚಕ್ರ ವಾಹನಗಳ ನಡುವೆ ಸರಣಿ ಡಿಕ್ಕಿ ಸಂಭವಿಸಿದ್ದು, ಇಬ್ಬರು ತೀವ್ರ ಗಾಯಗೊಂಡಿದ್ದಾರೆ.
ಕೋರ್ಟ್ ರಸ್ತೆಯಿಂದ ಇಳಿಯುತ್ತಿದ್ದ ಗೂಡ್ಸ್ ಆಟೋ ಮತ್ತು ಕರಂಗಲಪಾಡಿ ಕಡೆಯಿಂದ ರಸ್ತೆಗೆ ಪ್ರವೇಶಿಸುತ್ತಿದ್ದ ಕಾರಿನ ನಡುವೆ ಪ್ರಬಲ ಮುಖಾಮುಖಿ ಡಿಕ್ಕಿಯಾಗಿದೆ. ಈ ಅಪಘಾತದ ರಭಸಕ್ಕೆ ಅದೇ ಮಾರ್ಗದಲ್ಲಿ ಚಲಿಸುತ್ತಿದ್ದ ಬೈಕ್ ಸವಾರ ಕೂಡ ಸಿಲುಕಿಕೊಂಡು ಸರಣಿ ಅಪಘಾತಕ್ಕೆ ಕಾರಣವಾಯಿತು.
ಈ ದುರಂತದಲ್ಲಿ ಗೂಡ್ಸ್ ಆಟೋ ಚಾಲಕ ಹಾಗೂ ದ್ವಿಚಕ್ರ ವಾಹನ ಸವಾರನಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ತೀವ್ರತೆಗೆ ಮೂರೂ ವಾಹನಗಳು ಪೂರ್ಣಪ್ರಮಾಣದಲ್ಲಿ ಜಖಂಗೊಂಡಿದ್ದು, ಮಾಹಿತಿ ತಿಳಿಯುತ್ತಿದ್ದಂತೆ ಸಂಚಾರ ಸಂಚಾರ ವಿಭಾಗದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









