ಕಾರ್ಕಳ : ಕಾರ್ಕಳ ತಾಲೂಕಿನ ಶಿರ್ಲಾಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಹಾರಾಡಿ ಪ್ರದೇಶದಲ್ಲಿ ನೂತನ ಸೇತುವೆ ನಿರ್ಮಾಣಕ್ಕಾಗಿ ರಾಜ್ಯ ಲೋಕೋಪಯೋಗಿ ಇಲಾಖೆಯಿಂದ ಒಂದು ಕೋಟಿ ಐವತ್ತು ಲಕ್ಷ ರೂಪಾಯಿಗಳ ಮೊತ್ತದ ಅನುದಾನ ಅಧಿಕೃತವಾಗಿ ಬಿಡುಗಡೆಯಾಗಿದೆ.
ಹಾರಾಡಿ ಭಾಗದ ಗ್ರಾಮಸ್ಥರು ಎದುರಿಸುತ್ತಿದ್ದ ಬಹುದಿನಗಳ ಸಂಪರ್ಕ ಸಮಸ್ಯೆಯನ್ನು ಮನಗಂಡು, ಸಾರ್ವಜನಿಕರ ಮನವಿಗೆ ಪೂರಕವಾಗಿ ಸ್ಪಂದಿಸಿ ಅನುದಾನ ಕಲ್ಪಿಸಿಕೊಟ್ಟ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್, ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ, ಜಿಲ್ಲಾ ಉಸ್ತುವಾರಿ ಸಚಿವರಾದ ರಿಜ್ವಾನ್ ಅರ್ಷದ್ ಹಾಗೂ ಈ ಅನುದಾನ ಮಂಜೂರಾತಿಗೆ ಶ್ರಮಿಸಿದ ಕಾಂಗ್ರೆಸ್ ಮುಖಂಡ ಉದಯ ಕುಮಾರ್ ಶೆಟ್ಟಿ ಮುನಿಯಾಲು ಅವರಿಗೆ ಶಿರ್ಲಾಲು ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರಾದ ಅರುಣ್ ಪ್ರಸಾದ್ ಜೈನ್ ಅವರು ಗ್ರಾಮಸ್ಥರ ಪರವಾಗಿ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









