ಮಂಗಳೂರು : ಮಂಗಳೂರಿನಲ್ಲಿ ನಿವೃತ್ತ ವ್ಯಕ್ತಿಯೊಬ್ಬರು ‘ಡಿಜಿಟಲ್ ಅರೆಸ್ಟ್’ ನೆಪದಲ್ಲಿ ಲಕ್ಷಾಂತರ ರೂಪಾಯಿ ಸೈಬರ್ ವಂಚನೆಗೆ ಬಲಿಯಾದ ಘಟನೆ ಬೆಳಕಿಗೆ ಬಂದಿದ್ದು, ಈ ಹಿನ್ನೆಲೆಯಲ್ಲಿ ನಗರ ಪೊಲೀಸ್ ಕಮಿಷನರೇಟ್ ಸಾರ್ವಜನಿಕರಿಗೆ ಕಟ್ಟುನಿಟ್ಟಿನ ಜಾಗೃತಿ ಹಾಗೂ ಎಚ್ಚರಿಕೆ ನೀಡಿದೆ. ಭಾರತೀಯ ಕಾನೂನು ಚೌಕಟ್ಟಿನಲ್ಲಿ ‘ಡಿಜಿಟಲ್ ಅರೆಸ್ಟ್’ ಎಂಬ ಯಾವುದೇ ರೀತಿಯ ಅಧಿಕೃತ ವ್ಯವಸ್ಥೆ ಇಲ್ಲವೇ ಇಲ್ಲ ಎಂದು ಪೊಲೀಸ್ ಇಲಾಖೆ ಸ್ಪಷ್ಟವಾಗಿ ತಿಳಿಸಿದೆ.
ಅಪರಿಚಿತ ಸಂಖ್ಯೆಗಳಿಂದ ಬರುವ ಬೆದರಿಕೆ ಕರೆಗಳು, ವೀಡಿಯೊ ಕಾಲ್ಗಳು ಅಥವಾ ಕನಿಷ್ಠ ಸಮಯದಲ್ಲಿ ಹೆಚ್ಚಿನ ಲಾಭ ಗಳಿಸಬಹುದೆಂಬ ಹೂಡಿಕೆಯ ಆಮಿಷಗಳನ್ನು ಸಾರ್ವಜನಿಕರು ಯಾವುದೇ ಕಾರಣಕ್ಕೂ ನಂಬಬಾರದು ಎಂದು ಸೂಚಿಸಲಾಗಿದೆ. ಒಂದು ವೇಳೆ ಯಾರಾದರೂ ಇಂತಹ ಸೈಬರ್ ಮೋಸಕ್ಕೆ ಒಳಗಾದಲ್ಲಿ, ತಕ್ಷಣವೇ ಸೈಬರ್ ಹೆಲ್ಪ್ಲೈನ್ ಸಂಖ್ಯೆ 1930ಕ್ಕೆ ಕರೆ ಮಾಡಿ ದೂರು ದಾಖಲಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









