ಮಂಗಳೂರು : ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರ ಸಮರ್ಥ ಹಾಗೂ ದಕ್ಷ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ಹಾಕುತ್ತಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ನೌಕರರ ಸಹಕಾರ ಸಂಘವು ಇದೀಗ ಅತ್ಯುನ್ನತ ರಾಜ್ಯಮಟ್ಟದ ಪ್ರಶಸ್ತಿಯನ್ನು ಪಡೆದುಕೊಂಡು ಕೀರ್ತಿ ತಂದಿದೆ. ಸುಮಾರು 95 ವರ್ಷಗಳ ಸುದೀರ್ಘ ಹಾಗೂ ಹೆಮ್ಮೆಯ ಇತಿಹಾಸವನ್ನು ಹೊಂದಿರುವ ಈ ಸಂಘವು, ಈಗಾಗಲೇ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಸತತವಾಗಿ ಒಂಬತ್ತು ಬಾರಿ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಳ್ಳುವ ಮೂಲಕ ತನ್ನ ವಿಶಿಷ್ಟ ಸೇವೆಯನ್ನು ಸಾಬೀತುಪಡಿಸಿದೆ.
ಸಹಕಾರ ಮತ್ತು ಸಮಾಜ ಸೇವಾ ಕ್ಷೇತ್ರದಲ್ಲಿ ನೌಕರರ ಸಂಘವು ತೋರಿರುವ ಈ ವಿಶಿಷ್ಟ ಸೇವೆಗೆ ರಾಜ್ಯ ಮಟ್ಟದ ಪ್ರತಿಷ್ಠಿತ ಪ್ರಶಸ್ತಿ ಲಭಿಸಿರುವುದು ಸಂಘದ ಎಲ್ಲ ಪದಾಧಿಕಾರಿಗಳು ಹಾಗೂ ಸದಸ್ಯರಲ್ಲಿ ತೀವ್ರ ಹರ್ಷ ಮೂಡಿಸಿದೆ ಎಂದು ಸಂಘದ ಅಧ್ಯಕ್ಷ ಜಗದೀಶ್ ಅಂಚನ್ ಹೇಳಿದ್ದಾರೆ. ಈ ಐತಿಹಾಸಿಕ ಸಾಧನೆಗೆ ಕಾರಣರಾದ ಜಿಲ್ಲಾ ಆಡಳಿತ, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸರ್ಕಾರದ ಎಲ್ಲಾ ಪ್ರತಿನಿಧಿಗಳಿಗೆ ಸಂಘದ ವತಿಯಿಂದ ಅತ್ಯಂತ ಹೃದಯಪೂರ್ವಕ ಹಾಗೂ ವಿಶೇಷ ಕೃತಜ್ಞತೆಗಳನ್ನು ಸಲ್ಲಿಸಲಾಗಿದೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









