ಮೂಲ್ಕಿ : ಮೂಲ್ಕಿಯ ಮಡಿವಾಳ ಕೆರೆ ನಿವಾಸಿಯೂ, ಹಿರಿಯ ನ್ಯಾಯವಾದಿಯೂ ಆಗಿದ್ದ ಭಾಸ್ಕರ ಹೆಗ್ಡೆ (62) ಅವರು ನವೆಂಬರ್ 2 ರಂದು ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೃತರು ಪತ್ನಿ, ಒಬ್ಬ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಉತ್ತಮ ವಾಗ್ಮಿಯಾಗಿ ಗುರುತಿಸಿಕೊಂಡಿದ್ದ ಅವರು ಪ್ರತಿದಿನ ಯೋಗಾಭ್ಯಾಸದಲ್ಲಿ ನಿರತರಾಗಿರುತ್ತಿದ್ದರು. ಮೂಲ್ಕಿ ಆಟೋರಿಕ್ಷಾ ಯೂನಿಯನ್ನ ಗೌರವಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಇವರು, ಕರಾವಳಿಯ ಹಲವಾರು ಸಾಮಾಜಿಕ ಹಾಗೂ ಸಾಂಸ್ಕೃತಿಕ ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









