ಮಂಗಳೂರು : ಬೈಕಂಪಾಡಿಯಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರರೊಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ಹಳೆಯಂಗಡಿಯ ಕದಿಕೆ ಮೂಲದ ಇಮ್ತಿಯಾಜ್ (39) ಮೃತ ದುರ್ದೈವಿಯಾಗಿದ್ದು, ಇವರು ಶಿಪ್ಪಿಂಗ್ ಸಂಸ್ಥೆಯೊಂದರಲ್ಲಿ ಚಾಲಕರಾಗಿ ವೃತ್ತಿ ನಿರ್ವಹಿಸುತ್ತಿದ್ದರು.
ಪಣಂಬೂರಿನಲ್ಲಿರುವ ತಮ್ಮ ಕರ್ತವ್ಯದ ಕಚೇರಿಗೆ ಸ್ಕೂಟರ್ನಲ್ಲಿ ತೆರಳುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಲಾರಿ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಡಿಕ್ಕಿಯಿಂದಾಗಿ ಗಂಭೀರ ಗಾಯಗೊಂಡಿದ್ದ ಇಮ್ತಿಯಾಜ್ ಅವರನ್ನು ಸ್ಥಳೀಯರ ನೆರವಿನಿಂದ ನಗರದ ಖಾಸಗಿ ಆಸ್ಪತ್ರೆಗೆ ಸೇರಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಸುದ್ದಿಗಳು









