ಉಪ್ಪಿನಂಗಡಿ : ರಾಷ್ಟ್ರೀಯ ಹೆದ್ದಾರಿ 75ರ ಕೂಟೇಲು ಸಮೀಪ ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ರಸ್ತೆಗೆ ಮಗುಚಿಬಿದ್ದ ಬೈಕ್ ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ಮಂಗಳವಾರ ನಡೆದಿದೆ.
ಉಪ್ಪಿನಂಗಡಿ ಕಡೆಯಿಂದ ಚಲಿಸುತ್ತಿದ್ದ ಬೈಕ್ ಸವಾರನು ದ್ವಿಪಥ ರಸ್ತೆಯ ಏಕಮುಖ ಮಾರ್ಗದಿಂದ ದಿಢೀರನೆ ಮತ್ತೊಂದು ಪಥಕ್ಕೆ ವಾಹನವನ್ನು ಚಲಾಯಿಸಿದ್ದಾನೆ. ಈ ವೇಳೆ ಹಿಂಬದಿಯಿಂದ ವೇಗವಾಗಿ ಬಂದ ಕಾರು ಬೈಕ್ಗೆ ಡಿಕ್ಕಿ ಹೊಡೆದಿದೆ. ಢಿಕ್ಕಿಯ ತೀವ್ರತೆಗೆ ಬೈಕ್ ರಸ್ತೆಯ ಮೇಲೆ ಮಗುಚಿಬಿದ್ದು, ತಕ್ಷಣವೇ ಬೆಂಕಿ ಹೊತ್ತಿಕೊಂಡಿದೆ. ಸ್ಥಳದಲ್ಲಿ ಬೆಂಕಿ ನಂದಿಸಲು ಸೂಕ್ತ ವ್ಯವಸ್ಥೆ ಇಲ್ಲದ ಕಾರಣ ವಾಹನವು ಬೆಂಕಿಯ ಕೆನ್ನಾಲಕೆಗೆ ಸಿಲುಕಿ ಭಾಗಶಃ ಸುಟ್ಟು ಕರಕಲಾಗಿದೆ.
ಈ ಭೀಕರ ಅಪಘಾತದ ನಡುವೆಯೂ ಬೈಕ್ ಸವಾರ ಸಣ್ಣಪುಟ್ಟ ಗಾಯಗಳೊಂದಿಗೆ ಪವಾಡಸಾದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









