ಮಂಗಳೂರು : ದಾವಣಗೆರೆಯಿಂದ ಮಂಗಳೂರಿಗೆ ಸಾಗಿಸಲಾಗುತ್ತಿದ್ದ 1.15 ಕೋಟಿ ರೂಪಾಯಿ ನಗದು ಹಣವನ್ನು ದರೋಡೆ ಮಾಡಲು ಸಂಚು ರೂಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿಯಾಗಿರುವ ಕಾರವಾರದ ಪೊಲೀಸ್ ಕಾನ್ಸ್ಟೇಬಲ್ ಒಬ್ಬರನ್ನು ಮಂಗಳೂರಿನ ಉರ್ವ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಕಾರವಾರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾನ್ಸ್ಟೇಬಲ್ ಶ್ರೀಶೈಲ್ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ ಎಂದು ತನಿಖಾಧಿಕಾರಿಗಳು ದೃಢಪಡಿಸಿದ್ದಾರೆ.
ಈ ದರೋಡೆ ಸಂಚು ಪ್ರಕರಣದಲ್ಲಿ ಈಗಾಗಲೇ ಉಡುಪಿ ಜಿಲ್ಲೆಯ ಕಾಪು ಮೂಲದ ಅಝೀಝ್, ಹಳಿಯಾಳದ ನಸ್ರುಲ್ಲಾಖಾನ್ ಹಾಗೂ ಕಾರವಾರದ ನಿತ್ಯಾನಂದ ಮತ್ತು ಖಾಲಿದ್ ಎಂಬ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಪ್ರಕರಣದ ಪ್ರಮುಖ ಸೂತ್ರಧಾರ ಎನ್ನಲಾದ ಗಣೇಶ ಕೋಳಂಕರ್ ತಲೆಮರೆಸಿಕೊಂಡಿದ್ದು, ಆತನ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿದಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









