ಕಾಸರಗೋಡು ಜೂನ್ 26: ಮಗನೊಬ್ಬ ತನ್ನ ತಾಯಿಗೆ ಬೆಂಕಿ ಹಚ್ಚಿ ಕೊಲೆಗೈದ ಘಟನೆ ಮಂಜೇಶ್ವರ ತಾಲೂಕಿನ ವರ್ಕಾಡಿಯಲ್ಲಿ ಗುರುವಾರ ಮುಂಜಾನೆ ನಡೆದಿದೆ.
ಕೊಲೆಯಾದವರನ್ನು ಹಿಲ್ಡಾ (60) ಎಂದು ಗುರುತಿಸಲಾಗಿದೆ. ಪುತ್ರ ಮೆಲ್ವಿನ್ ಈ ಕೃತ್ಯ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಈ ವೇಳೆ ನೆರೆಮನೆಯ ಲೋಲಿಟಾ (30) ಗಂಭೀರ ಗಾಯಗೊಂಡಿದ್ದಾರೆ.
ಹಿಲ್ಡಾ ಮತ್ತು ಮೆಲ್ವಿನ್ ಮಾತ್ರ ಮನೆಯಲ್ಲಿದ್ದರು. ಮಲಗಿದ್ದ ಹಿಲ್ಡಾ ಅವರ ಮೇಲೆ ಮಗ ಮೆಲ್ವಿನ್ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದರು. ಈ ವೇಳೆ ಹಿಲ್ಡಾ ಅವರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಆದರೆ ಸುಟ್ಟಗಾಯಗಳಿಂದ ಸಾವನಪ್ಪಿದ್ದಾರೆ ಎಂದು ಹೇಳಲಾಗಿದೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಅಪರಾಧ, ಟಾಪ್ ಸುದ್ದಿ









