ಸುಳ್ಯ : ತಮಿಳುನಾಡಿನ ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಮಾಜಿ ಐಪಿಎಸ್ ಅಧಿಕಾರಿ ಕೆ ಅಣ್ಣಾಮಲೈ ಕುಟುಂಬ ಸಮೇತ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಪಡೆದಿದ್ದಾರೆ.
ಅಣ್ಣಾಮಲೈ ತಮ್ಮ ಪತ್ನಿ ಮತ್ತು ಮಕ್ಕಳ ಜೊತೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ್ದು, ದೇವರ ದರ್ಶನ ಪಡೆದರು.
ಬಳಿಕ ಅಣ್ಣಾಮಲೈ ಅವರು ಶ್ರೀ ಸಂಪುಟ ನರಸಿಂಹಸ್ವಾಮಿ ಸುಬ್ರಹ್ಮಣ್ಯ ಮಠದಲ್ಲಿ ಆಶ್ಲೇಷ ಬಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಅವರ ಪತ್ನಿ, ಮಕ್ಕಳು ಹಾಗೂ ಕುಟುಂಬಸ್ಥರು ಉಪಸ್ಥಿತರಿದ್ದರು. ಪೂಜೆ ಮುಗಿಸಿದ ನಂತರ ವಿದ್ಯಾ ಪ್ರಸನ್ನ ತೀರ್ಥ ಶ್ರೀಪಾದರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು ನಾನು ಕಳೆದ ಹತ್ತು ಹದಿನೈದು ವರ್ಷಗಳಿಂದ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಬರುತ್ತಾ ಇದ್ದೇನೆ. ಆಶ್ಲೇಷ ನಕ್ಷತ್ರದ ಈ ಪುಣ್ಯದಿನದಂದು ದೇವರಲ್ಲಿ ಪ್ರಾರ್ಥನೆ ಮಾಡಿದ್ದು ತಮಿಳುನಾಡಿನ ಜನ, ಕರ್ನಾಟಕದ ಜನ ಹಾಗೂ ಇಡೀ ಭಾರತದ ಜನರು ಸುಖ ಶಾಂತಿ ನೆಮ್ಮದಿಯಾಗಿ ಇರಬೇಕು ಹಾಗೂ ಎಲ್ಲಾ ಜನರಿಗೂ ಒಳ್ಳೆದಾಗಬೇಕು ಎಂದು ಪ್ರಾರ್ಥನೆ ಮಾಡಿದ್ದೇನೆ ಎಂದರು.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









