ಸುಳ್ಯ : ದರೋಡೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಜುಲೈ 4ರಂದು ಬಂಧಿಸಿದ್ದಾರೆ.
ತಮಿಳುನಾಡಿನ ತಿರುವರೂರ್ ನಿವಾಸಿ ಸುಧಾಕರ ಆರ್ಮುಗಮ್ (42) ಬಂಧಿತ ಆರೋಪಿ.
ಆರೋಪಿಯು 2022ರ ಮಾರ್ಚ್ 20ರಂದು ರಂದು ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸಂಪಾಜೆ ಗ್ರಾಮದ ಚೆಟ್ಟೆಕಲ್ಲು ಎಂಬಲ್ಲಿನ ಮನೆಯೊಂದರಲ್ಲಿ 1,50,000ರೂ. ನಗದು ಹಾಗೂ 01 ಮೊಬೈಲ್ ಫೋನ್ ದರೋಡೆ ಮಾಡಿದ್ದನು.
ಆರೋಪಿಯನ್ನು ಸುಳ್ಯ ಠಾಣಾ ಪೊಲೀಸರು ತಮಿಳುನಾಡಿನ ಕೊಯಮತ್ತೂರಿನಲ್ಲಿ ದಸ್ತಗಿರಿ ಮಾಡಿ, ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ. ಮಾನ್ಯ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಟಾಪ್ ಸುದ್ದಿ, ಅಪರಾಧ, ಪ್ರಾದೇಶಿಕ ಸುದ್ದಿಗಳು, ಸುದ್ದಿಗಳು









