ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬೀರಮಲೆ ಬೆಟ್ಟದಲ್ಲಿ ನಡೆದ ನೈತಿಕ ಪೊಲೀಸ್ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪುತ್ತೂರು ನಗರ ಠಾಣಾ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಬಂಧಿತರನ್ನು ಕಡಬ ನಿವಾಸಿ ಪುರುಷೋತ್ತಮ (43) ಹಾಗೂ ಆರ್ಯಾಪು ಪುತ್ತೂರು ನಿವಾಸಿ ರಾಮಚಂದ್ರ (38) ಎಂದು ಗುರುತಿಸಲಾಗಿದೆ. ಸಂತ್ರಸ್ಥ ಬಾಲಕನ ತಂದೆ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿದ ಪೊಲೀಸರು ಇಬ್ಬರು ಆರೋಪಿಗಳನ್ನ ಅರೆಸ್ಟ್ ಮಾಡಿದ್ದಾರೆ.
ಬಾಲಕ ಮತ್ತು ಬಾಲಕಿ ಬೀರಮಲೆ ಗುಡ್ಡಕ್ಕೆ ಆಗಮಿಸಿರುವುದನ್ನು ಗಮನಿಸಿದ ದುಷ್ಕರ್ಮಿಗಳ ತಂಡ ಅವರನ್ನು ತಡೆದು ನಿಲ್ಲಿಸಿ ಅವರ ಹೆಲ್ಮೆಟ್ ಕಸಿದುಕೊಂಡು ಹಲ್ಲೆಗೆ ಯತ್ನಿಸಿದ್ದರು ಹಾಗೂ ಅವಾಚ್ಯ ಶಬ್ದಗಳಿಂದ ಬೈದು, ನಿಮ್ಮ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕುತ್ತೇವೆಂದು ಬೆದರಿಕೆ ಹಾಕಿದ್ದಾರೆ. ಅಲ್ಲದೆ ಅಪ್ರಾಪ್ತ ಯುವಕನನ್ನು ಅನ್ಯಧರ್ಮದವನೆಂದು ನಿಂದಿಸಿ, ಸ್ಥಳದಲ್ಲಿದ್ದ ಇತರ ಸಾರ್ವಜನಿಕರನ್ನು ಕರೆದು ಅವಮಾನಿಸಿ ವಿಡಿಯೋ ಮಾಡಿರುತ್ತಾರೆ. ನಂತರ ಆರೋಪಿಗಳು ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಸದ್ರಿ ಘಟನೆಯ ಮೂಲಕ ಕೋಮು ಸಾಮರಸ್ಯ ಕದಡಲು ಹಾಗೂ ಧರ್ಮಗಳ ನಡುವೆ ದ್ವೇಷ ಉಂಟಾಗಲು ಪ್ರಚೋದನೆ ಮಾಡಿದ ಸದ್ರಿ ಇಬ್ಬರು ಅಪರಿಚಿತ ವ್ಯಕ್ತಿಗಳ ವಿರುದ್ದ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿಅ.ಕ್ರ: 54/2025, ಕಲಂ: 126(2),352, 351(2), 353(1)(ಅ), 57, 196(1)(ಸಿ) ಜೊತೆಗೆ 3(5) ಬಿಎನ್ಎಸ್ 2023 ರಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದೀಗ ಇಬ್ಬರು ಆರೋಪಿಗಳನ್ನು ಪುತ್ತೂರು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಅಪರಾಧ, ಟಾಪ್ ಸುದ್ದಿ, ಸುದ್ದಿಗಳು









