ಉಡುಪಿ : ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಅವರು ಎರಡು ತಿಂಗಳ ಕಾಲ ಉಡುಪಿ ಜಿಲ್ಲೆಗೆ ಪ್ರವೇಶಿಸದಂತೆ ನಿಷೇಧ ಹೇರಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ.ಭಾನುವಾರ ಆದೇಶಿಸಿದ್ದಾರೆ.
ಹಿಂದೂ ಜಾಗರಣ ವೇದಿಕೆ ವತಿಯಿಂದ ರಾಜ್ಯ ಸರ್ಕಾರದ ಹಿಂದೂ ವಿರೋಧಿ ನೀತಿಯನ್ನು ಖಂಡಿಸಿ ಕಾರ್ಕಳ, ಕುಂದಾಪುರ, ಉಡುಪಿ ತಾಲ್ಲೂಕುಗಳಲ್ಲಿ ಪ್ರತಿಭಟನೆ ಆಯೋಜಿಸಿದ್ದು, ಅದರಂತೆ ಜುಲೈ 7ರಂದು ಸಂಜೆ 4 ಗಂಟೆಗೆ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಬಳಿ ಬೃಹತ್ ಪ್ರತಿಭಟನಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಬರುವ ಭಾಷಣಗಾರರ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ. ಪ್ರಮುಖ ಭಾಷಣಗಾರರನ್ನಾಗಿ ಸತೀಶ್ ಪೂಜಾರಿ ಅವರನ್ನು ಕರೆಸಿ ಭಾಷಣ ಮಾಡುವ ಸಾಧ್ಯತೆಯ ಬಗ್ಗೆ ಆದೇಶದಲ್ಲಿ ತಿಳಿಸಲಾಗಿದೆ.
ಉಡುಪಿ ಜಿಲ್ಲೆಯ ಕಾರ್ಕಳ, ಕುಂದಾಪುರ ತಾಲ್ಲೂಕುಗಳಲ್ಲಿಯೂ ಮುಂದಿನ ದಿನಗಳಲ್ಲಿ ಹಿಂದೂ ಜಾಗರಣ ವೇದಿಕೆಯ ವತಿಯಿಂದ ಹಲವಾರು ಪ್ರತಿಭಟನೆಗಳನ್ನು ಹಮ್ಮಿಕೊಂಡು ಅಲ್ಲಿಯೂ ಸತೀಶ ಪೂಜಾರಿಯಾವ ಭಾಷಣ ಇತ್ತು ಎಂದು ಹೇಳಲಾಗಿದೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಟಾಪ್ ಸುದ್ದಿ, ಪ್ರಾದೇಶಿಕ ಸುದ್ದಿಗಳು, ಸುದ್ದಿಗಳು









