ಹೈದರಾಬಾದ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಫೋಟೋವನ್ನು ಸ್ಯಾನಿಟರಿ ಪ್ಯಾಡ್ನಲ್ಲಿ ಹಾಕಿ ವಿಡಿಯೋ ಪ್ರಸಾರ ಮಾಡಿದ ಹಾಸ್ಯನಟ ರತನ್ ರಂಜನ್ ಮತ್ತು ಇತರರ ವಿರುದ್ಧ ಹೈದರಾಬಾದ್ನಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ತೆಲಂಗಾಣ ಯುವ ಕಾಂಗ್ರೆಸ್ ಅಧ್ಯಕ್ಷ ಜಕ್ಕಿಡಿ ಶಿವ ಚರಣ್ ರೆಡ್ಡಿ ಅವರು ಪೊಲೀಸರಿಗೆ ದೂರು ನೀಡಿದ್ದು, ರಂಜನ್ ಮತ್ತು ಇತರರು ಸಾಮಾಜಿಕ ಮಾಧ್ಯಮ ಪೋಸ್ಟ್ಗಳ ಮೂಲಕ ರಾಹುಲ್ ಗಾಂಧಿಯವರ ವಿರುದ್ಧ ಸುಳ್ಳು ಮತ್ತು ದುರುದ್ದೇಶಪೂರಿತ ಮಾಹಿತಿಯನ್ನು ಹರಡುತ್ತಿದ್ದಾರೆ. ಈ ಮೂಲಕ ಮಹಿಳೆಯರ ಗೌರವಕ್ಕೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿದ್ದಾರೆ.
ದೂರುದಾರರ ಪ್ರಕಾರ, ರಂಜನ್, ರಾಹಲ್ ಗಾಂಧಿಯವರ ಎಡಿಟ್ ಮಾಡಿದ ಚಿತ್ರವನ್ನು ಸ್ಯಾನಿಟರಿ ಪ್ಯಾಡ್ನೊಳಗೆ ಇರಿಸಿ, ಅದರ ಅಶ್ಲೀಲ ವಿಡಿಯೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಕಟಿಸುವ/ಪ್ರಸಾರ ಮಾಡುವ ಮೂಲಕ ರಂಜನ್ ಬಿಹಾರದಲ್ಲಿ ಮಾತ್ರವಲ್ಲದೆ ಭಾರತದಾದ್ಯಂತ ಮಹಿಳೆಯರ ಘನತೆಗೆ ಧಕ್ಕೆ ತಂದಿದ್ದಾರೆ ಮತ್ತು ಮಹಿಳೆಯರ ಆರೋಗ್ಯದ ಸಮಸ್ಯೆಯನ್ನು ಕ್ಷುಲ್ಲಕಗೊಳಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ಬಿಹಾರ ದಲ್ಲಿ ರಾಹುಲ್ ಗಾಂಧಿ ಚಿತ್ರವಿರುವ ಸ್ಯಾನಿಟರಿ ಪ್ಯಾಡ್
ಬಿಹಾರ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿಯಿರುವಂತೆಯೇ ಕಾಂಗ್ರೆಸ್ ಪಕ್ಷ ಮಹಿಳಾ ಮತದಾರರನ್ನು ಸೆಳೆಯಲು ರಾಹುಲ್ ಗಾಂಧಿ ಅವರ ಚಿತ್ರವಿರುವ ಸ್ಯಾನಿಟರಿ ಪ್ಯಾಡ್ಗಳನ್ನು ವಿತರಿಸುವ ಯೋಜನೆಯನ್ನು ಘೋಷಿಸಿದೆ.
`ಪ್ರಿಯದರ್ಶಿನಿ ಉಡಾನ್ ಯೋಜನಾ’ ಎಂಬ ಈ ಯೋಜನೆಯಡಿ, ಬಿಹಾರದಲ್ಲಿ 5 ಲಕ್ಷಕ್ಕೂ ಅಧಿಕ ಮಹಿಳೆಯರಿಗೆ ಈ ಸ್ಯಾನಿಟರಿ ಪ್ಯಾಡ್ಗಳನ್ನು ವಿತರಿಸುವ ಗುರಿಯನ್ನು ಕಾಂಗ್ರೆಸ್ ಹೊಂದಿದೆ. ಈ ಯೋಜನೆಯು ಋತುಸ್ರಾವದ ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶವನ್ನು ಹೊಂದಿದೆ ಎಂದು ಪಕ್ಷದ ನಾಯಕರು ಹೇಳಿದ್ದಾರೆ.
ಬಿಹಾರ ಕಾಂಗ್ರೆಸ್ನ ಅಧ್ಯಕ್ಷ ರಾಜೇಶ್ ಕುಮಾರ್ ಅವರು ಶುಕ್ರವಾರ ಪಾಟ್ನಾದ ಸದಾಕತ್ ಆಶ್ರಮದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ಯೋಜನೆಯನ್ನು ಘೋಷಿಸಿದ್ದರು. ಈ ಕಾರ್ಯಕ್ರಮವನ್ನು ಮಹಿಳಾ ಕಾಂಗ್ರೆಸ್ನ ಮೂಲಕ ಜಾರಿಗೆ ತರಲಾಗುವುದು ಎಂದು ತಿಳಿಸಿದರು.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಹೊಸ ಸುದ್ದಿಗಳು, ಸುದ್ದಿಗಳು









