ಮಂಗಳೂರು : ನಗರದ ಜೆಪ್ಪು ಬಪ್ಪಾಲ್, ನಂದಿಗುಡ್ಡೆಯ ಒಂದನೇ ಅಡ್ಡ ರಸ್ತೆಯ ಬೆಥೆಸ್ಡಾ ಎಲ್ಡರ್ಲೀ ಹೋಮ್ ಕೇರ್ (Bethesda Elderly Home Care) ಸಂಸ್ಥೆಯಲ್ಲಿ ಕೇರ್ ಟೇಕರ್ ಆಗಿ ಕೆಲಸ ಮಾಡುತ್ತಿದ್ದ ಐಶ್ವರ್ಯ.ಸಿ (20) ಎಂಬವರು ಕಾಣೆಯಾಗಿದ್ದು, ದಕ್ಷಿಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಣೆಯಾದವರ ಚಹರೆ:- ಎತ್ತರ 5.2 ಅಡಿ, ಚಹರೆ: ಎಣ್ಣೆ ಕಪ್ಪು ಮೈಬಣ್ಣ, ಸಪೂರ ಶರೀರ, ಕೋಲುಮುಖ, ಕಪ್ಪು ತಲೆಕೂದಲು ಹೊಂದಿರುತ್ತಾರೆ. ಕಾಣೆಯಾದ ದಿನ ನೇವಿ ಬ್ಲೂ ಬಣ್ಣದ ಚೂಡಿದಾರ, ಬಿಳಿ ಬಣ್ಣದ ಲೇಗಿನ್ಸ್ ಧರಿಸಿದ್ದರು. ಕನ್ನಡ ಭಾಷೆ ಮಾತನಾಡುತ್ತಾರೆ.
ಕಾಣೆಯಾದವರ ಬಗ್ಗೆ ಮಾಹಿತಿ ಪತ್ತೆಯಾದಲ್ಲಿ ದಕ್ಷಿಣ ಪೋಲಿಸ್ ಠಾಣೆ ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು