ಮಂಗಳೂರು : ಧರ್ಮಸ್ಥಳದಲ್ಲಿ ನಾಪತ್ತೆಯಾಗಿದ್ದ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿ ಅನನ್ಯ ಭಟ್ ಪ್ರಕರಣಕ್ಕೆ ಸಂಬಂಧಿಸಿ ಆಕೆಯ ತಾಯಿ ಮಂಗಳವಾರ ಸಂಜೆ ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರನ್ನು ಭೇಟಿಯಾಗಿ ದೂರು ಸಲ್ಲಿಸಿದ್ದಾರೆ.
ಅನನ್ಯ ಭಟ್ ತಾಯಿ ಸುಜಾತ ಭಟ್ ಅವರು ತಮ್ಮ ವಕೀಲರೊಂದಿಗೆ ಎಸ್ಪಿ ಅವರನ್ನು ಭೇಟಿಯಾಗಿ, ಮಗಳ ನಾಪತ್ತೆ ಪ್ರಕರಣದ ಬಗ್ಗೆ ದೂರು ನೀಡಿ, ನ್ಯಾಯ ಒದಗಿಸುವಂತೆ ಮನವಿ ಮಾಡಿದರು.
ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯ ಭಟ್ ಅವರು ಇಪ್ಪತ್ತೆರಡು ವರ್ಷಗಳ ಹಿಂದೆ (2003ರಲ್ಲಿ) ಧರ್ಮಸ್ಥಳ ದೇವಸ್ಥಾನಕ್ಕೆ ಬಂದವರು ನಿಗೂಢವಾಗಿ ನಾಪತ್ತೆಯಾಗಿದ್ದರು.
ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಕೊಲೆಗಳು ಹಾಗು ಅವುಗಳನ್ನು ಒತ್ತಡದಿಂದಾಗಿ ತಾನೇ ಹೂತು ಹಾಕಿದ್ದೇನೆ ಎಂದು ವ್ಯಕ್ತಿಯೊಬ್ಬ ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ನೀಡಿರುವುದು ಈಗ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ದೊಡ್ಡ ಸಂಚಲನ ಮೂಡಿಸಿದೆ. ಅದೇ ಹೊತ್ತಿಗೆ ಸುಜಾತಾ ಭಟ್ ಅವರು ತಮ್ಮ ಮಗಳೂ ಅಲ್ಲೇ ಕಾಣೆಯಾಗಿದ್ದಾಳೆ ಎಂದು ದೂರು ಸಲ್ಲಿಸಿದ್ದಾರೆ.

ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಟಾಪ್ ಸುದ್ದಿ, ಪ್ರಾದೇಶಿಕ ಸುದ್ದಿಗಳು, ಸುದ್ದಿಗಳು