ಬೆಳ್ತಂಗಡಿ : ಪತ್ನಿಯೊದಿಂಗೆ ಜಗಳವಾಡಿ ಪತಿ ಪತ್ನಿಯನ್ನು ಇರಿದು ಕೊಲೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಜಾರು ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ.
ಪತ್ನಿ ಝೀನತ್ (40) ಎಂಬವರನ್ನು ಪತಿ ರಫೀಕ್ (47) ಕೊಲೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ.
ಗುರುವಾರ ಬೆಳಗ್ಗೆ ದಂಪತಿ ಮಧ್ಯೆ ಜಗಳ ನಡೆದಿದೆ ಎನ್ನಲಾಗಿದ್ದು, ಈ ವೇಳೆ ರಫೀಕ್ ಪತ್ನಿ ಝೀನತ್ ರನ್ನು ಚೂರಿಯಿಂದ ಇರಿದು ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ.
ವಿದೇಶದಲ್ಲಿ ಉದ್ಯೋಗದಲ್ಲಿದ್ದ ರಫೀಕ್ ಎರಡು ವರ್ಷದ ಹಿಂದೆ ವಿದೇಶದ ಉದ್ಯೋಗ ತ್ಯಜಿಸಿ ತೆಕ್ಕಾರಿನಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಟಾಪ್ ಸುದ್ದಿ, ಅಪರಾಧ, ಪ್ರಾದೇಶಿಕ ಸುದ್ದಿಗಳು, ಸುದ್ದಿಗಳು









