ಕಾರ್ಕಳ : ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಅವರ ತಂದೆ ಹಿರಿಯ ಆರ್ ಎಸ್ಎಸ್ ಮುಖಂಡ ಕೆ. ಎಂ. ವಾಸುದೇವ (87) ಅವರು ಗುರುವಾರ ಮುಂಜಾನೆ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇತ್ತೀಚೆಗಷ್ಟೇ ಮಣಿಪಾಲ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.
ರಾಷ್ಟ್ರೀಯ ಸ್ವಯಂ ಸೇವಕ ಸಂಘದದಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದ ಅವರು ಹಲವು ವರ್ಷ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ, ಪುತ್ರ ಶಾಸಕ ಸುನಿಲ್ ಕುಮಾರ್ ಹಾಗೂ ಓರ್ವ ಪುತ್ರಿ ಸೇರಿದಂತೆ ಅಪಾರ ಬಂದು ವರ್ಗ ಅಗಲಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









