ಬೆಳ್ತಂಗಡಿ : ಬೆಳ್ತಂಗಡಿ ತಾಲ್ಲೂಕಿನ ಕೊಕ್ಕಡ ಗ್ರಾಮದ ಸೌತಡ್ಕ ಗುಂಡಿಯಲ್ಲಿ ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಸಾವನಪ್ಪಿದ ಘಟನೆ ನಡೆದಿದೆ.
ಮೃತರನ್ನು ಸೌತಡ್ಕ ನಿವಾಸಿ ಬಾಲಕೃಷ್ಣ (60) ಎಂದು ಗುರುತಿಸಲಾಗಿದೆ.
ಗುರುವಾರ ಬೆಳ್ಳಗೆ 2 ಕಾಡಾನೆಗಳು ಗೇರು ಪ್ಲಾಂಟೇಶನ್ ನಲ್ಲಿ ತಿರುಗಾಡುತ್ತಿದ್ದು ಕಂಡು ಬಂದಿದೆ. ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಬಂದಿದ್ದರು. ಆನೆ ಓಡಿಸುವ ಸಂದರ್ಭ ಆನೆ ತಿರುಗಿ ಬಂದು ಬಾಲಕೃಷ್ಣ ಶೆಟ್ಟಿ ಎಂಬವರಿಗೆ ತಿವಿದು, ಗಂಭೀರ ಗಾಯಗೊಳಿಸಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತದೇಹವನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಘಟನಾ ಸ್ಥಳಕ್ಕೆ ಧರ್ಮಸ್ಥಳ ಠಾಣೆ ಪೊಲೀಸರು, ಅರಣ್ಯಾಧಿಕಾರಿಗಳು ಹಾಗೂ ಸ್ಥಳೀಯ ಗ್ರಾಮ ಪಂಚಾಯಿತಿ ಅಧಿಕಾರಿಗಳು ಭೇಟಿ ನೀಡಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









