ಮಂಗಳೂರು : ಎಂ ಆರ್ ಪಿ ಎಲ್ ಹಸಿರು ವಲಯ ನಿರ್ಮಾಣ ಸಂಭಂದ 27 ಎಕರೆ ಭೂಸ್ವಾಧೀನಕ್ಕೆ ನಿರ್ವಸಿತರಿಗೆ ಸೂಕ್ತ ಪರಿಹಾರ ಒದಗಿಸಲು ನಿರ್ಧರಿಸಲಾಗಿದೆ.
ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಲೋಕಸಭಾ ಸದಸ್ಯ ಕ್ಯಾ. ಬ್ರಿಜೇಶ್ ಚೌಟ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ನಿರ್ಧರಿಸಲಾಯಿತು.
ಪ್ರತಿ ಎಕರೆಗೆ 8 ಲಕ್ಷ ರೂ. ಪರಿಹಾರ, ಉದ್ಯೋಗ ಬದಲು ಪ್ರತಿ ಕುಟುಂಬಕ್ಕೆ 20 ಲಕ್ಷ ರೂ. ನಗದು ಮತ್ತು ನಿವೇಶನ ಸೇರಿದಂತೆ ಪರಿಹಾರ ನೀಡಲು MRPL ಜಿಲ್ಲಾಡಳಿತಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಹಲವು ವರ್ಷಗಳಿಂದ ಬಾಕಿ ಇರುವ ಈ ವಿಷಯವನ್ನು ಎಲ್ಲರಿಗೂ ತೃಪ್ತಿಕರವಾಗಿ ಇತ್ಯರ್ಥ ಪಡಿಸಬೇಕು. ನಿರ್ವಸಿತರ ಸಮಸ್ಯೆಯ ತೀವ್ರತೆ ತನಗೆ ಅರಿವಿದ್ದು, ಉತ್ತಮ ಪ್ಯಾಕೇಜ್ ದೊರಕಬೇಕು ಎಂದು ಸಂಸದರು ಹೇಳಿದರು.
ಇಲ್ಲಿನ 27 ಎಕರೆಯಲ್ಲಿ 408 ಡೋರ್ ನಂಬರ್ ಗಳಿದ್ದು,ಸಮೀಕ್ಷೆಯಂತೆ 93.96 ಕೋಟಿ ರೂ. ಭೂಸ್ವಾಧೀನ ಮತ್ತಿತರ ವೆಚ್ಚವಾಗುವ ಸಾಧ್ಯತೆ ಇದೆ ಎಂದು ಸಮೀಕ್ಷೆ ನಡೆಸಿದ ಕೆಪಿಟಿ ಸಂಸ್ಥೆ ವರದಿ ನೀಡಿದೆ.
ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಮಾತನಾಡಿ, MRPL ಸಲ್ಲಿಸಿರುವ ಪ್ಯಾಕೇಜ್ ಬಗ್ಗೆ ಶೀಘ್ರದಲ್ಲೇ ಅಂತಿಮ ನಿರ್ಧಾರಕ್ಕೆ ಬರಲಾಗುವುದು. ಜೋಕಟ್ಟೆ ಮತ್ತು ಬಾಳ ಗ್ರಾ.ಪಂ ಹಾಗೂ ಬಜಪೆ ಪ.ಪಂ. ವ್ಯಾಪ್ತಿಯಲ್ಲಿದ್ದು, ಈ ಪ್ರದೇಶಗಳಲ್ಲಿ ಹೊಸದಾಗಿ ಡೋರ್ ನಂಬರ್ ಗಳನ್ನು ನೀಡದಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಸಭೆಯಲ್ಲಿ ಶಾಸಕ ಉಮಾನಾಥ ಕೋಟ್ಯಾನ್, MRPL ಎಂ.ಡಿ. ಶ್ಯಾಂಪ್ರಸಾದ್, ಕೆಐಎಡಿಬಿ ಭೂಸ್ವಾಧೀನಾಧಿಕಾರಿ ರಾಜು, ನಿರ್ವಸಿತರ ಮುಖಂಡರಾದ ಮುನೀರ್ ಕಾಟಿಪಳ್ಳ ಮತ್ತಿತರರು ಇದ್ದರು
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









