ಮಂಗಳೂರು: ಕಳೆದ 24 ಗಂಟೆಗಳಲ್ಲಿ ಭಾರೀ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆಮಾಡಿದ್ದು ಮುಂಜಾಗ್ರತಾ ಕ್ರಮವಾಗಿ ಮಂಗಳೂರು ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಜುಲೈ 25 ರಂದು ದಕ್ಷಿಣಕನ್ನಡ ಜಿಲ್ಲಾಧಿಕಾರಿಗಳು ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.
ಈ ಸಮಯದಲ್ಲಿ ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ, ಸಮುದ್ರ ತೀರಕ್ಕೆ ಪ್ರವಾಸಿಗರು, ಸಾರ್ವಜನಿಕರು ಹೋಗದಂತೆ ಎಚ್ಚರಿಕೆ ನೀಡಲಾಗಿದೆ. ಮೀನು ಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಇತ್ತೀಚಿನ ಸುದ್ದಿಗಳು, ಪ್ರಾದೇಶಿಕ ಸುದ್ದಿಗಳು, ಸುದ್ದಿಗಳು









