ಮಂಗಳೂರು: ಧರ್ಮಸ್ಥಳ ದೂರಿಗೆ ಸಂಬಂಧಿಸಿದಂತೆ ದೂರುದಾರ ಗುರುತು ಪಡಿಸಿದ ಸ್ಥಳಗಳ ಪೈಕಿ ಮಂಗಳವಾರ ಅಗೆಯುವ ವೇಳೆ ಸೈಟ್ ಸಂಖ್ಯೆ 1ರಲ್ಲಿ ವಿಶೇಷ ತನಿಖಾ ತಂಡ (ಎಸ್ಐಟಿ)ವು ಮಹತ್ವದ ಸಾಕ್ಷ್ಯಗಳನ್ನು ಪತ್ತೆ ಹಚ್ಚಿದೆ ಎಂದು ಹೇಳಲಾಗಿದೆ.
ನಿನ್ನೆ ಮಂಗಳವಾರದ ಕಾರ್ಯಚರಣೆಯ ವೇಳೆ ಸುಮಾರು 2.5 ಅಡಿ ಆಳದಲ್ಲಿ ಕೆಂಪು ಬಣ್ಣದ ರವಿಕೆ, PAN ಕಾರ್ಡ್ ಹಾಗೂ ATM ಕಾರ್ಡ್ ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ. ಈ ಬೆಳವಣಿಗೆಯು ತನಿಖೆಗೆ ಹೊಸ ಆಯಾಮ ನೀಡಿದೆ ಎಂದು ಅವರು ಹೇಳಿದ್ದಾರೆ.
ಪತ್ತೆಯಾಗಿರುವ PAN ಕಾರ್ಡ್ ಮತ್ತು ATM ಕಾರ್ಡ್ ಗಳಲ್ಲಿ ಒಂದರ ಮೇಲೆ ಪುರುಷನ ಹೆಸರು ಮತ್ತು ಇನ್ನೊಂದರಲ್ಲಿ ‘ಲಕ್ಷ್ಮಿ’ ಎಂಬ ಹೆಸರಿರುವುದು ಕಂಡುಬಂದಿದೆ. ಈ ಸುಳಿವುಗಳು ವಿಚಾರಣೆಗೆ ಹೊಸ ದಿಕ್ಕು ನೀಡಬಹುದು. ಎಸ್ ಐ ಟಿ ಅಧಿಕಾರಿಗಳು ಈ ಪ್ರಮುಖ ಸುಳಿವಿನ ಬೆನ್ನತ್ತಿ ಹೋಗುತ್ತಾರೆ ಎಂಬ ಭರವಸೆಯಿದೆ ಎಂದು ಅವರು ಹೇಳಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









