ಬಂಟ್ವಾಳ : ನಾಪತ್ತೆಯಾಗಿದ್ದ ಯುವಕನೋರ್ವನ ಮೃತದೇಹ ಬಜಾಲ್ ಮುಗೇರು ಸಮೀಪ ನೇತ್ರಾವತಿ ನದಿ ಮಧ್ಯ ಭಾಗದಲ್ಲಿ ತೇಲಾಡುವ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಜುಲೈ 27ರಂದು ನಾಪತ್ತೆಯಾಗಿದ್ದ ಕಡೇಶಿವಾಲಯದ ಹೇಮಂತ್ ಆಚಾರ್ಯ (21) ಅವರ ಮೃತದೇಹ ಎಂದು ಗುರುತಿಸಲಾಗಿದೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.
ಜುಲೈ 28ರಂದು ಈತನ ಸ್ಕೂಟರ್ ಹಾಗೂ ಮೊಬೈಲ್ ಬಂಟ್ವಾಳ ಸಮೀಪದ ಜಕ್ರಿಬೆಟ್ಟು ಕಿಂಡಿ ಅಣೆಕಟ್ಟಿನ ಬಳಿ ಪತ್ತೆಯಾಗಿತ್ತು. ಹೀಗಾಗಿ ಆತ ನದಿಗೆ ಹಾರಿರಬಹುದು ಎಂಬ ಶಂಕೆಯಿಂದ ಹುಡುಕಾಟ ಆರಂಭಗೊಂಡಿತ್ತು. ಜುಲೈ 31ರಂದು ಹೇಮಂತ್ ಶವವಾಗಿ ಪತ್ತೆಯಾಗಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









