ಧರ್ಮಸ್ಥಳ : ಮೂವರು ಯೂಟ್ಯೂಬರ್ ಗಳ ಮೇಲೆ ಪಂಗಾಳ ಎಂಬಲ್ಲಿ ಸುಮಾರು ಐವತ್ತು ಜನರ ಗುಪೊಂದು ಹಲ್ಲೆ ಮಾಡಿ ಕ್ಯಾಮೆರಾ ಒಡೆದು ಹಾಕಿದ ಘಟನೆ ನಡೆದಿದೆ.
ಹಲ್ಲೆಗೊಳಗಾದವರನ್ನು ಕುಡ್ಲ ರಾಂಪೇಜ್ ನ ಅಜಯ್ ಅಂಚನ್, ಯುನೈಟೆಡ್ ಮೀಡಿಯಾದ ಅಭಿಷೇಕ್, ಸಂಚಾರಿ ಸ್ಟುಡಿಯೋದ ಸಿಬ್ಬಂದಿ ಎಂದು ಗುರುತಿಸಲಾಗಿದೆ.
ಬುಧವಾರ ಸೌಜನ್ಯ ಮನೆಗೆ ಬಿಗ್ ಬಾಸ್ ಖ್ಯಾತಿಯ ರಜತ್ ಕಿಶನ್ ಭೇಟಿ ನೀಡಿದ್ದರು. ಈ ವೇಳೆ ಪ್ರತಿಕ್ರಿಯೆ ಪಡೆಯೋದಕ್ಕೆ ಯುಟ್ಯೂಬರ್ಸ್ ತೆರಳಿದ್ದಾರೆ. ಆಗ ಗುಂಪೊಂದು ಮೂವರ ಮೇಲೆ ಹಲ್ಲೆ ಮಾಡಿದ್ದಾರೆ.
ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಕೆಎಸ್ ಅರ್ ಪಿ ತುಕಡಿ ನಿಯೋಜನೆ ಮಾಡಲಾಗಿದೆ.
ಎರಡು ಗುಂಪುಗಳ ಮಧ್ಯೆ ಕಿತ್ತಾಟ ನಡೆಯುತ್ತಿದ್ದಂತೆ ಪೊಲೀಸರು ಲಾಠಿ ಚಾರ್ಜ್ ಮಾಡಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









