ನವದೆಹಲಿ: 79ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ನವದೆಹಲಿಯ ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ, ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿದ ಮೋದಿಯವರು, ಈ ಬಾರಿ ದೀಪಾವಳಇ ಹಬ್ಬಕ್ಕೆ ಭರ್ಜರಿ ಉಡುಗೊರೆಯೊಂದನ್ನು ನೀಡುವುದಾಗಿ ಹೇಳಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿಯವರು , ಜಿಎಸ್ಟಿಯಲ್ಲಿ ಮಹತ್ವದ ಸುಧಾರಣೆ ತಂದು ತೆರಿಗೆ ಹೊರೆ ಕಡಿಮೆ ಮಾಡಲಾಗುವುದು ಎಂದು ಮೋದಿಯವರು ಹೇಳಿದ್ದಾರೆ.
ಕಳೆದ 8 ವರ್ಷಗಳಲ್ಲಿ, ನಾವು ಜಿಎಸ್ಟಿಯಲ್ಲಿ ಪ್ರಮುಖ ಸುಧಾರಣೆಯನ್ನು ಕೈಗೊಂಡಿದ್ದೇವೆ. ಮುಂದುವರೆದು ಮತ್ತಷ್ಟು ಜಿಎಸ್ಟಿ ಸುಧಾರಣೆಗಳನ್ನು ತರುತ್ತಿದ್ದೇವೆ. ಇದು ದೇಶಾದ್ಯಂತ ತೆರಿಗೆ ಹೊರೆಯನ್ನು ಕಡಿಮೆ ಮಾಡುತ್ತದೆ ಎಂದು ತಿಳಿಸಿದರು.
ತೆರಿಗೆ ಸ್ಲ್ಯಾಬ್ಗಳನ್ನು ತರ್ಕಬದ್ಧಗೊಳಿಸುವುದು, ಅಗತ್ಯ ಮತ್ತು ದಿನನಿತ್ಯದ ವಸ್ತುಗಳ ಮೇಲಿನ ಜಿಎಸ್ಟಿ ದರಗಳನ್ನು ಕಡಿಮೆ ಮಾಡುವುದರ ಮೇಲೆ ಗಮನ ನೀಡಲಾಗುತ್ತಿದೆ. ಈ ಬಗ್ಗೆ ರಾಜ್ಯಗಳೊಂದಿಗೆ ಮಾತನಾಡಿದ್ದೇವೆ ನಮ್ಮ ಕೈಗಾರಿಕೆಗಳು ದೊಡ್ಡ ಲಾಭವನ್ನು ಪಡೆಯುತ್ತವೆ. ದೈನಂದಿನ ವಸ್ತುಗಳು ಅಗ್ಗವಾಗುತ್ತವೆ. ಇದು ಆರ್ಥಿಕತೆಗೆ ದೊಡ್ಡ ಉತ್ತೇಜನ ನೀಡುತ್ತದೆ. ಈ ಮೂಲಕ ಸಾಮಾನ್ಯ ಜನರಿಗೆ ಜೀವನವನ್ನು ಸುಲಭಗೊಳಿಸುವ ಮತ್ತು ನಮ್ಮ ಆರ್ಥಿಕತೆಯನ್ನು ಬಲಪಡಿಸುವುಕ್ಕೆ ಕ್ರಮವಹಿಸಲಾಗುತ್ತದೆ ಎಂದು ಹೇಳಿದರು.
ಜೊತೆಗೆ ಪ್ರಧಾನಿ ಮೋದಿಯವರು ಪ್ರಧಾನ ಮಂತ್ರಿ ವಿಕಸಿತ್ ಭಾರತ್ ರೋಜ್ಗಾರ್ ಯೋಜನೆಯನ್ನೂ ಘೋಷಿಸಿದರು. ಈ ಯೋಜನೆಯಡಿಯಲ್ಲಿ, ಖಾಸಗಿ ವಲಯದಲ್ಲಿ ಮೊದಲ ಉದ್ಯೋಗ ಪಡೆಯುವವರಿಗೆ ಸರ್ಕಾರದಿಂದ 15,000 ರೂ. ಸಿಗಲಿದೆ.
ಜಿಎಸ್ಟಿ ಮಂಡಳಿಯ ಮುಂದಿನ ಸಭೆಯು ಸೆಪ್ಟೆಂಬರ್ 9ರಂದು ನಡೆಯಲಿದೆ. ಪ್ರಸ್ತುತ, ನಮ್ಮ ದೇಶದಲ್ಲಿ ಶೇ.0.5, ಶೇ.12, ಶೇ.18 ಮತ್ತು ಶೇ.28 ಜಿಎಸ್ಟಿ ಸ್ಲ್ಯಾಬ್ಗಳಿವೆ. ದೇಶದ ಜನರ ಖರೀದಿ ಶಕ್ತಿಯನ್ನು ಹೆಚ್ಚಿಸುವ ಗುರಿಯೊಂದಿಗೆ, ಕೇಂದ್ರ ಸರ್ಕಾರವು ವಿವಿಧ ವರ್ಗಗಳ ಸರಕುಗಳು, ಉತ್ಪನ್ನಗಳು ಮತ್ತು ಸೇವೆಗಳ ಮೇಲಿನ ಜಿಎಸ್ಟಿಯನ್ನು ಕಡಿಮೆ ಮಾಡುವತ್ತ ಕ್ರಮಗಳನ್ನು ತೆಗೆದುಕೊಳ್ಳುವ ಸಾಧ್ಯತೆಯಿದೆ.
ನರೇಂದ್ರ ಮೋದಿ ಅವರು, ಸತತ 12ನೇ ಬಾರಿಗೆ ದೇಶದ ಜನತೆಯನ್ನುದ್ದೇಶಿಸಿ ಭಾಷಣ ಮಾಡಿದ್ದು, ಈ ಮೂಲಕ ಇಂದಿರಾ ಗಾಂಧಿಯವರ ದಾಖಲೆಯನ್ನು ಮುರಿದಿದ್ದಾರೆ.
ಇಂದಿರಾ ಅವರು, 1966ರ ಜನವರಿಯಿಂದ 1977ರ ಮಾರ್ಚ್ ವರೆಗೆ ಹಾಗೂ 1980ರ ಜನವರಿಯಿಂದ 1984ರ ಅಕ್ಟೋಬರ್ವರೆಗೆ ಅಧಿಕಾರದಲ್ಲಿದ್ದರು. ಇಂದಿರಾ ಗಾಂಧಿಯವರು ಪ್ರಧಾನಿಯಾಗಿ ಒಟ್ಟು 16 ಬಾರಿ ಹಾಗೂ ಸತತವಾಗಿ 11 ಸಲ ಆಗಸ್ಟ್ 15ರಂದು ಧ್ವಜಾರೋಹಣ ಭಾಷಣ ಮಾಡಿದ್ದರು.
ಏಪ್ರಿಲ್ 22 ರಂದು, ಗಡಿಯಾಚೆಯಿಂದ ಬಂದಭಯೋತ್ಪಾದಕರು ಪಹಲ್ಗಮ್ಗೆ ಬಂದು ಅವರ ಧರ್ಮವನ್ನು ಕೇಳಿದ ನಂತರ ಜನರನ್ನು ಕೊಂದರು. ಪಹಲ್ಗಾಮ್ ಹತ್ಯಾಕಾಂಡದಿಂದ ಇಡೀ ವಿಶ್ವವೇ ಆಘಾತಕ್ಕೊಳಗಾಯಿತು. ಆಪರೇಷನ್ ಸಿಂಧೂರ್ ಮೂಲಕ ಆಕ್ರೋಶ ಹೊರಹಾಕಲಾಯಿತು. ಪಾಕಿಸ್ತಾನದಲ್ಲಿ ನಾವು ನಡೆಸಿದ ಆಪರೇಷನ್ ಸಿಂಧೂರ್ ದೊಡ್ಡ ವಿನಾಶವನ್ನೇ ತಂದಿದೆ. ಇದರ ಬಳಿಕ ಪ್ರತೀ ನಿತ್ಯ ಹೊಸ ಬೆಳವಣಿಗೆಗಳು ಕಂಡು ಬರುತ್ತಿವೆ. ಈ ಕೆಂಪು ಕೋಟೆಯಿಂದ, ಆಪರೇಷನ್ ಸಿಂದೂರ್ನ ವೀರರಿಗೆ ನಮಸ್ಕರಿಸಲು ನನಗೆ ಅವಕಾಶ ಸಿಗುತ್ತಿರುವುದಕ್ಕೆ ನನಗೆ ತುಂಬಾ ಹೆಮ್ಮೆಯಿದೆ ಎಂದರು.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ರಾಷ್ಟ್ರೀಯ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









