ಮಂಗಳೂರು : ಆಗಸ್ಟ್ 18ರಂದು ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮಾತ್ತು ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಕಾರಣ ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ರವರ ಮುನ್ಸೂಚನೆಯಂತೆ ಚಂಡಮಾರುತ ಬೀಸುವ ಸಾಧ್ಯತೆ ಇದ್ದು, ಸೋಮವಾರದಂದು ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಇರುತ್ತದೆ. ಮುಂಜಾಗೃತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ಕೆಳಗಿನಂತ ತುರ್ತು ಕ್ರಮಗಳನ್ನು ಕೈಗೊಂಡಿರುತ್ತದೆ.
ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ದಿನಾಂಕ: 18-08-2025 ರಂದು ರಜೆಯನ್ನು ಘೋಷಿಸಲಾಗಿರುತ್ತದೆ.
ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ, ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವುದು.
ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಈ ಮೂಲಕ ಸೂಚನೆ ನೀಡಿದೆ.
ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರತಕ್ಕದ್ದು. ವಿಪತ್ತು ನಿರ್ವಹಣೆಯನ್ನು ಚಾಚೂ ತಪ್ಪದೇ ಕಡ್ಡಾಯವಾಗಿ ನಿರ್ವಹಿಸುವುದು, ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಛೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವುದು.
ಪ್ರವಾಸಿಗರು / ಸಾರ್ವಜನಿಕರು ನದಿತೀರಕ್ಕೆ, ಸಮುದ್ರತೀರಕ್ಕೆ ತೆರಳದಂತೆ ಸೂಚಿಸಲಾಗಿದೆ.
ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಪ್ರತೀ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ತೆರೆದು ಸನ್ನದ್ಧ ಸ್ಥಿತಿಯಲ್ಲಿರಿಸಿಕೊಳ್ಳುವುದು. ಈ ಕ್ರಮಗಳನ್ನು ಸೂಚಿಸಲಾಗಿದೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಟಾಪ್ ಸುದ್ದಿ, ಪ್ರಾದೇಶಿಕ ಸುದ್ದಿಗಳು, ಸುದ್ದಿಗಳು









