ಮಂಗಳೂರು: ದ.ಕ.ಜಿಲ್ಲಾ ಮಹಿಳಾ ಕಾಂಗ್ರೆಸ್ ಪದಗ್ರಹಣ ಸಮಾರಂಭ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ಮಂಗಳವಾರ ನಡೆಯಿತು. ಕಾರ್ಯಕ್ರಮವನ್ನು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿಯವರು ದೀಪ ಬೆಳಗಿಸಿ ಉದ್ಘಾಟಿಸಿದರು.
ದ.ಕ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯ ನಗರ ಅಧ್ಯಕ್ಷೆಯಾಗಿ ಮಾಜಿ ಕಾರ್ಪೊರೇಟರ್ ಕುಮಾರಿ ಅಪ್ಪಿ ಹಾಗೂ ಗ್ರಾಮಾಂತರ ಅಧ್ಯಕ್ಷೆಯಾಗಿ ಉಷಾ ಅಂಚನ್ ಅವರಿಗೆ ಕಾಂಗ್ರೆಸ್ ಧ್ವಜವನ್ನು ನೀಡುವ ಮೂಲಕ ಅಧಿಕಾರವನ್ನು ಹಸ್ತಾಂತರಿಸಲಾಯಿತು. ರಾಜ್ಯ ಮಹಿಳಾ ಕಾಂಗ್ರೆಸ್ನ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ನಮಿತಾ ಡಿ ರಾವ್ ಮತ್ತು ರಾಜ್ಯ ಕಾರ್ಯದರ್ಶಿಯಾಗಿ ಝೀನತ್ ಅವರನ್ನು ನೇಮಕ ಮಾಡಲಾಯಿತು.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









