ಉಡುಪಿ : ನ್ಯಾಯಾಂಗ ಬಂಧನದಲ್ಲಿದ್ದ ಮಹೇಶ್ ಶೆಟ್ಟಿ ತಿಮರೋಡಿಗೆ ಉಡುಪಿ ನ್ಯಾಯಾಲಯವು ಶನಿವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಬಗ್ಗೆ ಅವಹೇಳನಾಕಾರಿ ಹೇಳಿಕೆ ನೀಡಿದ್ದ ಆರೋಪದ ಮೇಲೆ ಬಿಜೆಪಿ ಉಡುಪಿ ಗ್ರಾಮಾಂತರ ಘಟಕದ ಅಧ್ಯಕ್ಷ ರಾಜೀವ್ ಕುಲಾಲ್ ಅವರು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಜಾಮೀನು ಮಂಜೂರು ಮಾಡುವಾಗ, ನ್ಯಾಯಾಧೀಶ ನಾಗೇಶ್ ಎನ್ ಎ ಅವರು ತಿಮರೋಡಿ ಅವರಿಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ಇಂತಹ ಹೇಳಿಕೆಗಳನ್ನು ಪುನರಾವರ್ತಿಸದಂತೆ ಮತ್ತು ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ನೀಡಿದ್ದಾರೆ,
ಬಿಡುಗಡೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಮಹೇಶ್ ಶೆಟ್ಟಿ ತಿಮರೋಡಿ, ಸಹಕರಿಸಿದ ವಕೀಲರನ್ನು ನಾನು ಅಭಿನಂದಿಸುತ್ತೇನೆ. ನಮಗೆ ನಿನ್ನೆ ಜಾಮೀನು ಸಿಗಬೇಕಿತ್ತು. ಮುಸುಕುಧಾರಿ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂಬುದು ನನಗೆ ತಿಳಿದಿರಲಿಲ್ಲ. ಸರಿಯಾದ ವಿಚಾರಣೆ ನಡೆಯಲಿ, ಅದು ಒಳ್ಳೆಯದು. ಸುಜಾತಾ ಭಟ್ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಇಂದು ಎಲ್ಲವೂ ಸರಿಯಾಗಿದೆ. ಸುಜಾತಾ ಭಟ್ ನಮ್ಮ ಹೋರಾಟದ ಭಾಗವಲ್ಲ. ಮಾಧ್ಯಮಗಳು ಯಾವುದನ್ನು ಹೈಲೈಟ್ ಮಾಡಲು ಬಯಸುತ್ತಾರೋ ಅದಕ್ಕೆ ನಾವು ಏಕೆ ಪ್ರತಿಕ್ರಿಯಿಸಬೇಕು?” ಎಂದು ಹೇಳಿದರು.
ಈ ವಾರದ ಆರಂಭದಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾದ ನಂತರ ತಿಮರೋಡಿ ಅವರನ್ನು ಬಂಧಿಸಲಾಗಿತ್ತು, ಇದೀಗ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









