ಮಂಗಳೂರು : ಕೂಳೂರು ರಸ್ತೆಯಲ್ಲಿ ಗುಂಡಿ ತಪ್ಪಿಸಲು ಹೋಗಿ ರಸ್ತೆಗೆ ಬಿದ್ದ ಮಹಿಳೆಯ ಮೇಲೆ ಹಿಂದಿನಿಂದ ಬಂದ ಮೀನಿನ ಟ್ರಕ್ ಹರಿದ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳವಾರ ನಡೆದಿದೆ.
ಖಾಸಗಿ ಆಸ್ಪತ್ರೆಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಾಧವಿ ಎಂಬ ಮಹಿಳೆ ಸಾವನ್ನಪ್ಪಿದ್ದಾರೆ.
ಮೂಲ್ಕಿಯಿಂದ ಪಂಪ್ವೆಲ್ಗೆ ಸಾಗುವ ಹೆದ್ದಾರಿಯ ಮಾರ್ಗದಲ್ಲಿ ಹಲವಾರು ದೊಡ್ಡ ಗುಂಡಿಗಳು ಇರುವುದರಿಂದ ದಿನಕ್ಕೊಂದು ಅಪಘಾತ ಸಂಭವಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸ್ಥಳೀಯರು ದೂರಿದ್ದಾರೆ.
ರಸ್ತೆಗುಂಡಿಗಳನ್ನು ಮುಚ್ಚದೇ ನಿರ್ಲಕ್ಷ್ಯತನದಿಂದ ಅಪಘಾತಕ್ಕೆ ಕಾರಣವಾದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಯವರ ಮೇಲೆ ಹಾಗೂ ನಿರ್ಲಕ್ಷ್ಯತನದ ಚಾಲನೆ ಮಾಡಿರುವ ಲಾರಿ ಚಾಲಕನ ಮೇಲೆ ಮಂ.ಸಂಚಾರ ಉತ್ತರ ಪೊಲೀಸ್ ಠಾಣೆಯಲ್ಲಿ ಅ.ಕ್ರ 224/2025 ಕಲಂ 281, 106(1) ಬಿ.ಎನ್.ಎಸ್ ಮತ್ತು 198(ಎ) ಐಎಂವಿ ಕಾಯ್ದೆರಂತೆ ಪ್ರಕರಣ ದಾಖಲಾಗಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









