ಮಂಗಳೂರು : ಲಿಂಗತ್ವ ಅಲ್ಪಸಂಖ್ಯಾತರ (ಟ್ರಾನ್ಸ್ಜೆಂಡರ್) ಸಮೀಕ್ಷೆಯ ಚಾಲನೆ ಕುರಿತು ಸಮುದಾಯದಲ್ಲಿ ಅರಿವು ಮೂಡಿಸಲು ಹಾಗೂ ಸಾರ್ವಜನಿಕರಲ್ಲಿ ತಿಳುವಳಿಕೆ ನೀಡಲು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಕಾರದೊಂದಿಗೆ ಹಾಗೂ ಟ್ರಾನ್ಸ್ಜೆಂಡರ್ ಸಮುದಾಯದ ವ್ಯಕ್ತಿಗಳೊಂದಿಗೆ ಪೋಸ್ಟರ್ ಗಳನ್ನು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಿಡುಗಡೆಗೊಳಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶೆ ಜೇಬುನ್ನಿಸಾ ಮಾತನಾಡಿ, ಲಿಂಗತ್ವ ಅಲ್ಪಸಂಖ್ಯಾತರ ಸಮುದಾಯದವರು ಮುಖ್ಯವಾಹಿನಿಗೆ ಬರಲು ವಿವಿಧ ಕಾಯ್ದೆಗಳನ್ನು ರೂಪಿಸಿದ್ದು, ಪ್ರಯೋಜನ ಪಡೆಯಲು ಸಂದೇಶವನ್ನು ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಪರ ಜಿಲ್ಲಾಧಿಕಾರಿ ರಾಜು ಕೆ ವಹಿಸಿ, ಜಿಲ್ಲಾಡಳಿತದಿಂದ ಸಮುದಾಯದವರಿಗೆ ಎಲ್ಲಾ ರೀತಿಯ ಸಹಕಾರ ನೀಡಲಾಗುತ್ತದೆ ಎಂದು ತಿಳಿಸಿದರು.
ವೆನ್ಲಾಕ್ ಅಧೀಕ್ಷಕ ಡಾ.ಶಿವಪ್ರಕಾಶ್ ಮಾತನಾಡಿ, ಸ್ವ್ವಾವಲಂಬಿ ಬದುಕು ರೂಪಿಸಲು ಸರಕಾರ ಹಲವಾರು ಯೋಜನೆಗಳನ್ನು ಒಗದಿಸಿದ್ದು, ಸಮೀಕ್ಷೆಯ ನಂತರ ಜನಸಂಖ್ಯೆ ಅನುಗುಣವಾಗಿ ಯೋಜನೆಗಳನ್ನು ರೂಪಿಸಲು ಸಾಧ್ಯವಿದೆ. ಸಮೀಕ್ಷೆ ನಡೆಸಲು ಆಸ್ಪತ್ರೆಗಳಲ್ಲಿ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸಲಾಗುತ್ತದೆ ಎಂದು ಹೇಳಿದರು.
ಪೋಲಿಸ್ ಇಲಾಖೆಯಿಂದ ಕಾನೂನು ಸುವ್ಯವಸ್ಥೆಯನ್ನು ಸಮುದಾಯದವರಿಗೆ ಒದಗಿಸುವುದಾಗಿ ಪೆÇಲೀಸ್ ಇಲಾಖೆ ಅಧಿಕಾರಿ ಹೇಳಿದರು. ಜಿಲ್ಲಾ ಡ್ರಾಪ್ಕೋ ಅಧಿಕಾರಿ ಹಾಗೂ ಮಂಗಳೂರು ಮಹಾನಗರಪಾಲಿಕೆಯ ವಲಯ ಆಯುಕ್ತರು ಸಮುದಾಯವರಿಗೆ ಸಹಕಾರ ಹಾಗೂ ಸೌಲಭ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಲು ತಿಳಿಸಿದರು. ಟ್ರಾನ್ಸ್ಜೆಂಡರ್ ಸಮುದಾಯದ ಸಮೀಕ್ಷೆದಾರರು ಸಮೀಕ್ಷೆಯನ್ನು ಯಶಸ್ವಿಯಾಗಿ ನಡೆಸಿಕೊಡುವುದಾಗಿ ಭರವಸೆ ನೀಡಿದರು. ಸಮೀಕ್ಷೆಯನ್ನು ನಡೆಸಲು ಟ್ಯಾಬ್ಗಳನ್ನು ಸಮೀಕ್ಷೆದಾರಿಗೆ ನೀಡಲಾಯಿತು.
ಲಿಂಗತ್ವ ಅಲ್ಪಸಂಖ್ಯಾತರನ್ನು (ಟ್ರಾನ್ಸ್ಜೆಂಡರ್ಸ್) ಮುಖ್ಯ ವಾಹಿನಿಗೆ ತರಲು ಆಗತ್ಯವಾದ ಸೌಲಭ್ಯಗಳನ್ನು ಒದಗಿಸಲು ಸಮುದಾಯದ ಜನಸಂಖ್ಯೆಯೊಂದಿಗೆ ಶೈಕ್ಷಣಿಕಮಟ್ಟ ಸಾಮಾಜಿಕ ಹಾಗೂ ಆರ್ಥಿಕ ಮಾಹಿತಿಯು ಅತೀ ಅಗತ್ಯವಾಗಿರುವುದರಿಂದ ಸಮೀಕ್ಷೆ ಕಾರ್ಯ ಸುಗಮವಾಗಿ ನಡೆಯಲು ಹಾಗೂ ಸಮುದಾಯದವರಿಗೆ ಹೆಚ್ಚಿನ ಅರಿವು ಮೂಡಿಸುವ ಉದ್ದೇಶದಿಂದ ಸರಕಾರದಿಂದ ಪೆÇೀಸ್ಟರ್ಸ್ಗಳನ್ನು ಒದಗಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಉಸ್ಮಾನ್. ಎ ಹೇಳಿದರು. ಮಹಿಳಾ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕಿ ಚಂದ್ರಿಕಾ ವಂದಿಸಿದರು.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಟಾಪ್ ಸುದ್ದಿ, ಪ್ರಾದೇಶಿಕ ಸುದ್ದಿಗಳು, ಸುದ್ದಿಗಳು









