ಉಡುಪಿ : ಎಕೆಎಂಎಸ್ ಬಸ್ ಮಾಲೀಕ ಸೈಫುದ್ದೀನ್ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ನಾಲ್ಕನೇ ಆರೋಪಿ ಮಹಿಳೆಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.
ನಾಲ್ಕನೇ ಆರೋಪಿಯನ್ನು ಪ್ರಕರಣದ ಮೊದಲ ಆರೋಪಿ ಫೈಜಲ್ ಖಾನ್ ಅವರ ಪತ್ನಿ ರಿಧಾ ಶಬಾನಾ (27) ಎಂಬುವುದಾಗಿ ಗುರುತಿಸಲಾಗಿದೆ. ಅವರು ಹತ್ಯೆಯ ಯೋಜನೆಯಲ್ಲಿ ಭಾಗಿಯಾಗಿದ್ದಾರೆಂದು ಆರೋಪಿಸಲಾಗಿದೆ.
ಈ ಹಿಂದೆ ಸೈಫುದ್ದೀನ್ನ ಮೂವರು ಸ್ನೇಹಿತರಾದ ಫೈಜಲ್ ಖಾನ್, ಶುಕೂರ್ ಮತ್ತು ಶರೀಫ್ ಅವರನ್ನು ಬಂಧಿಸಲಾಗಿತ್ತು.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಅಪರಾಧ, ಟಾಪ್ ಸುದ್ದಿ, ಪ್ರಾದೇಶಿಕ ಸುದ್ದಿಗಳು, ಸುದ್ದಿಗಳು









