ಉಡುಪಿ : ಕಾರ್ಕಳದ ಮಾಜಿ ಶಾಸಕ ದಿ.ಗೋಪಾಲ ಭಂಡಾರಿ ಪುತ್ರ ಸುದೀಪ್ ಭಂಡಾರಿ ಬ್ರಹ್ಮಾವರ ತಾಲೂಕಿನ ಬಾರ್ಕೂರಿನಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಈ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಸುದೀಪ್ ಭಂಡಾರಿ ಅವರು ಹೆಬ್ರಿಯಲ್ಲಿ ವೈನ್ ಶಾಪ್ ನಿರ್ವಹಿಸುತ್ತಿದ್ದರು. ಮೃತರು ತಾಯಿ, ಪತ್ನಿ, ಇಬ್ಬರು ಮಕ್ಕಳು, ಸಹೋದರ ಮತ್ತು ಸಹೋದರಿಯನ್ನು ಅಗಲಿದ್ದಾರೆ. ಕುಟುಂಬವು ರಾಜಕೀಯ ಹಿನ್ನೆಲೆಯಲ್ಲಿದ್ದು, ಗೋಪಾಲ ಭಂಡಾರಿ ಅವರು ಕಾರ್ಕಳ ಕ್ಷೇತ್ರದಿಂದ 1999 ರಿಂದ 2004 ಮತ್ತು 2008 ರಿಂದ 2013ರವರೆಗೆ ಕಾಂಗ್ರೆಸ್ ಶಾಸಕರಾಗಿ ಸೇವೆ ಸಲ್ಲಿಸಿದ್ದರು.
ಸುದೀಪ್ ಅವರ ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಆದರೆ ಪ್ರಾಥಮಿಕ ಮಾಹಿತಿಯ ಪ್ರಕಾರ, ಆರ್ಥಿಕ ಬಿಕ್ಕಟ್ಟಿನಿಂದಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸದ್ಯಕ್ಕೆ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ವಿವಿಧ ಗಣ್ಯರು ಮತ್ತು ನಾಗರಿಕರು ಸುದೀಪ್ ಭಂಡಾರಿ ಅವರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









