ಧರ್ಮಸ್ಥಳ: ಧರ್ಮಸ್ಥಳದ ಬಹುಚರ್ಚಿತ ‘ಬುರುಡೆ ಪ್ರಕರಣ’ಕ್ಕೆ ಸಂಬಂಧಿಸಿದಂತೆ, ವಿಶೇಷ ತನಿಖಾ ದಳದ (ಎಸ್ಐಟಿ) ಅಧಿಕಾರಿಗಳು ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿ ಆರೋಪಿ ಚಿನ್ನಯ್ಯನ ಹೇಳಿಕೆಯನ್ನು ದಾಖಲಿಸುವ ಕಾರ್ಯವನ್ನು ಶನಿವಾರ ಪೂರ್ಣಗೊಳಿಸಿದ್ದಾರೆ.
ಈ ಪ್ರಕರಣದ ಪ್ರಮುಖ ಆರೋಪಿ ಚಿನ್ನಯ್ಯನು, ತಾನು ಧರ್ಮಸ್ಥಳದ ಸುತ್ತಮುತ್ತಲ ಪ್ರದೇಶಗಳಲ್ಲಿ ಅನಾಥ ಮೃತದೇಹಗಳನ್ನು ಹೂತಿರುವುದಾಗಿ ಈ ಹಿಂದೆ ಹೇಳಿಕೆ ನೀಡಿದ್ದನು. ಈ ಹೇಳಿಕೆಯ ಕುರಿತು ಮತ್ತಷ್ಟು ವಿವರಗಳು ಹಾಗೂ ಸ್ಪಷ್ಟೀಕರಣ ಪಡೆಯುವ ದೃಷ್ಟಿಯಿಂದ ಎಸ್ಐಟಿ ಅಧಿಕಾರಿಗಳು ಕಾರಾಗೃಹಕ್ಕೆ ಭೇಟಿ ನೀಡಿದ್ದರು.
ಎಸ್ಐಟಿ ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ನೇತೃತ್ವದ ತಂಡವು ಬೆಳ್ತಂಗಡಿ ನ್ಯಾಯಾಲಯದಿಂದ ಅಗತ್ಯ ಅನುಮತಿ ಪಡೆದು, ಅಕ್ಟೋಬರ್ 17 ರಂದು ಶಿವಮೊಗ್ಗ ಕಾರಾಗೃಹವನ್ನು ತಲುಪಿತ್ತು. ಶನಿವಾರವೂ ಮುಂದುವರೆದ ಹೇಳಿಕೆ ದಾಖಲು ಪ್ರಕ್ರಿಯೆ ಯಶಸ್ವಿಯಾಗಿ ಮುಕ್ತಾಯಗೊಂಡಿದೆ.
ಮುಂದಿನ ತನಿಖೆ:
ಚಿನ್ನಯ್ಯನಿಂದ ಪಡೆದ ಹೇಳಿಕೆಗಳ ಆಧಾರದ ಮೇಲೆ ಎಸ್ಐಟಿ ತಂಡವು ಮುಂದಿನ ತನಿಖಾ ಹಂತಕ್ಕೆ ಸಿದ್ಧತೆ ನಡೆಸಿದೆ. ಈ ಹೇಳಿಕೆಗಳ ಪ್ರಕಾರ, ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ವ್ಯಕ್ತಿಗಳನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆಗಳಿವೆ. ಜೊತೆಗೆ, ತನಿಖೆಯನ್ನು ಇತರ ಎಲ್ಲಾ ಆಯಾಮಗಳಿಂದಲೂ ಮುಂದುವರಿಸಲು ಎಸ್ಐಟಿ ನಿರ್ಧರಿಸಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಟಾಪ್ ಸುದ್ದಿ, ಪ್ರಾದೇಶಿಕ ಸುದ್ದಿಗಳು, ಸುದ್ದಿಗಳು









