ಉಳ್ಳಾಲ ಠಾಣಾ ವ್ಯಾಪ್ತಿಯ ಕುಂಪಲ ಬೈಪಾಸ್ನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಆಕೆಯ ಮಲತಂದೆ ಅಮೀರ್ ಅತ್ಯಾಚಾರವೆಸಗಿದ ಆಘಾತಕಾರಿ ಘಟನೆ ನಡೆದಿದೆ.
ಕುಂಪಲದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಈ ಕುಟುಂಬದಲ್ಲಿ, ರಾತ್ರಿ ತಾಯಿ ಮತ್ತು ಮಗಳು ಮಲಗಿದ್ದ ಸಂದರ್ಭದಲ್ಲಿ ಆರೋಪಿ ಅಮೀರ್ ಈ ಕೃತ್ಯವೆಸಗಿದ್ದಾನೆ. ಬಾಲಕಿ ಪ್ರತಿರೋಧಿಸಿ ಕಿರುಚಿದಾಗ, ಆಕೆಯ ಬಾಯಿಗೆ ದಿಂಬು ಒತ್ತಿ ಬಲವಂತಪಡಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ಭಾನುವಾರವೇ (ರವಿವಾರ) ಆರೋಪಿ ಅಮೀರ್ನನ್ನು ಬಂಧಿಸಿ, ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಅಪರಾಧ, ಟಾಪ್ ಸುದ್ದಿ, ಪ್ರಾದೇಶಿಕ ಸುದ್ದಿಗಳು, ಸುದ್ದಿಗಳು









