ಬೆಳ್ತಂಗಡಿ: ಅರಸಿನಮಕ್ಕಿ ಗ್ರಾಮದಲ್ಲಿ ದುಃಖಕರ ಘಟನೆ ವರದಿಯಾಗಿದ್ದು, ಸ್ಥಳೀಯ ಗೋಪಾಲಕೃಷ್ಣ ಅನುದಾನಿತ ಶಾಲೆಯಲ್ಲಿ ಗೌರವ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಯುವತಿ, ತೇಜಸ್ವಿನಿ (23) ಅವರ ಮೃತದೇಹ ಗುರುವಾರ (ಅ. 23) ಅವರ ಮನೆಯ ಸಮೀಪದ ಬಾವಿಯಲ್ಲಿ ಪತ್ತೆಯಾಗಿದೆ. ಈ ಘಟನೆಯು ಸ್ಥಳೀಯರಲ್ಲಿ ಆಘಾತವನ್ನುಂಟು ಮಾಡಿದೆ.
ಅರಸಿನಮಕ್ಕಿಯ ಬೂಡುಮುಗೇರು ನಿವಾಸಿ ತೇಜಸ್ವಿನಿ, ಕಳೆದ ಎರಡು ವರ್ಷಗಳಿಂದ ಶಾಲಾ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಈ ಮಧ್ಯೆ ಅವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ.
ಆದರೆ, ತೇಜಸ್ವಿನಿ ಅವರು ಬಾವಿಗೆ ಆಕಸ್ಮಿಕವಾಗಿ ಜಾರಿ ಬಿದ್ದರೇ ಅಥವಾ ಆತ್ಮಹತ್ಯೆಗೆ ಶರಣಾದರೇ ಎಂಬ ಕುರಿತು ಇದುವರೆಗೆ ಯಾವುದೇ ಸ್ಪಷ್ಟತೆ ಲಭ್ಯವಾಗಿಲ್ಲ.
ಮಾಹಿತಿ ತಿಳಿದ ಕೂಡಲೇ ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತ ತೇಜಸ್ವಿನಿ ಅವರು ತಂದೆ-ತಾಯಿ, ಸಹೋದರಿಯರು ಹಾಗೂ ಇತರ ಕುಟುಂಬ ಸದಸ್ಯರನ್ನು ಅಗಲಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









