ಮಂಗಳೂರು : ಮಂಗಳೂರಿನ ಮಹಾಕಾಳಿಪಡ್ಪು ರೈಲ್ವೆ ಕೆಳ ಸೇತುವೆ ಕಾಮಗಾರಿ ಅತಿಯಾದ ವಿಳಂಬ ಮತ್ತು ಆಮೆಗತಿಯಲ್ಲಿ ಸಾಗುತ್ತಿರುವುದನ್ನು ಖಂಡಿಸಿ ಶನಿವಾರದಂದು ಕಾಂಗ್ರೆಸ್ ಪಕ್ಷವು ತೀವ್ರ ಪ್ರತಿಭಟನೆ ಹಮ್ಮಿಕೊಂಡಿತ್ತು. ಈ ಪ್ರತಿಭಟನೆಯು ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ ಮತ್ತು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಸಲೀಂ ಅವರ ನೇತೃತ್ವದಲ್ಲಿ ‘ರೈಲ್ವೇ ಕೆಳಸೇತುವೆ ಚಲೋ’ ಎಂಬ ಹೆಸರಿನಲ್ಲಿ ನಡೆಯಿತು.
ಪ್ರತಿಭಟನಾಕಾರರು ಕಾಮಗಾರಿ ನಡೆಯುವ ಸ್ಥಳಕ್ಕೆ ನೇರವಾಗಿ ತೆರಳಿದರು. ಅಲ್ಲಿ ಅವರು, ಈ ವಿಳಂಬ ಕಾಮಗಾರಿಯಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ಗಮನದಲ್ಲಿಟ್ಟುಕೊಂಡು, ಯೋಜನೆಯನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು ಎಂದು ಸ್ಮಾರ್ಟ್ ಸಿಟಿ ಮ್ಯಾನೇಜರ್ ಅರುಣ್ ಪ್ರಭು ಅವರನ್ನು ಒತ್ತಾಯಿಸಿದರು.
ಪ್ರತಿಭಟನೆಯ ಹಿನ್ನೆಲೆಯಲ್ಲಿ, ಸ್ಮಾರ್ಟ್ ಸಿಟಿ ಮ್ಯಾನೇಜರ್ ಅರುಣ್ ಪ್ರಭು ಅವರು ಕಾಂಗ್ರೆಸ್ ನಿಯೋಗಕ್ಕೆ ಭರವಸೆ ನೀಡಿದರು. ಅದರಂತೆ, ಮುಂದಿನ 30 ದಿನಗಳ ಒಳಗಡೆ ರೈಲ್ವೆ ಕೆಳ ಸೇತುವೆ ಕಾಮಗಾರಿಯನ್ನು ಸಂಪೂರ್ಣವಾಗಿ ಮುಗಿಸಿ, ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಲಾಗುವುದು ಎಂದು ಅವರು ತಿಳಿಸಿದರು.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









