ಬಂಟ್ವಾಳ: ಬಿ.ಸಿ. ರೋಡಿನಲ್ಲಿ ಅಕ್ಟೋಬರ್ 30 ರಂದು ಅಪಘಾತದ ಗಾಯಾಳುಗಳನ್ನು ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ಗೆ ದ್ವಿಚಕ್ರ ವಾಹನ ಸವಾರನೊಬ್ಬ ಅಡ್ಡಿಪಡಿಸಿದ ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿ ಸ್ಕೂಟರ್ ಸವಾರನನ್ನು ಪುತ್ತೂರು ತಾಲೂಕಿನ ಬೆಟ್ಟಂಪಾಡಿ ನಿವಾಸಿ ಮನ್ಸೂರ್ (38) ಎಂದು ಗುರುತಿಸಲಾಗಿದೆ. ಈ ಆ್ಯಂಬುಲೆನ್ಸ್, ಗುರುವಾರ ಬಿಳಲೆ ಘಾಟ್ನಲ್ಲಿ ನಡೆದ ಅಪಘಾತದ ಗಾಯಾಳುಗಳಿಗೆ ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ನೀಡಿದ ಬಳಿಕ, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸುತ್ತಿತ್ತು.
ದ್ವಿಚಕ್ರ ವಾಹನ ಸವಾರ ಮನ್ಸೂರ್, ಆ್ಯಂಬುಲೆನ್ಸ್ನ ಸೈರನ್ ಶಬ್ದ ಕೇಳುತ್ತಿದ್ದರೂ ಕೂಡ ದಾರಿ ಬಿಟ್ಟು ಕೊಡದೆ, ಅದರ ಸಂಚಾರಕ್ಕೆ ಅನಗತ್ಯವಾಗಿ ಅಡಚಣೆ ಉಂಟು ಮಾಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಸಂಪೂರ್ಣ ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿತ್ತು.
ಈಗ, ಆರೋಪಿ ಸ್ಕೂಟರ್ ಸವಾರನ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಕಾನೂನು ಕ್ರಮ ಜರುಗಿಸಲಾಗಿದ್ದು, ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









