ಮಂಗಳೂರು: ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಮತ್ತು ಕಲ್ಕೂರ ಪ್ರತಿಷ್ಠಾನದ ಸಹಯೋಗದೊಂದಿಗೆ ಈ ವರ್ಷದ ಕನಕದಾಸ ಪ್ರಶಸ್ತಿಯನ್ನು ತೋನ್ಸೆ ಪುಷ್ಕಳ ಕುಮಾರ್ ಅವರಿಗೆ ಘೋಷಿಸಲಾಗಿದೆ. ಅವರು ಹರಿದಾಸ, ಹವ್ಯಾಸಿ ಯಕ್ಷಗಾನ ಭಾಗವತ ಮತ್ತು ಸುಗಮ ಸಂಗೀತ ಕ್ಷೇತ್ರಗಳಲ್ಲಿ ತಮ್ಮ ಸೇವೆಯನ್ನು ಸಲ್ಲಿಸಿದ್ದಾರೆ. ಈ ಪ್ರಶಸ್ತಿಯು ಮಹಾತ್ಮ ಕನಕದಾಸ ಜಯಂತಿಯ ಪ್ರಯುಕ್ತ ಅವರಿಗೆ ಸಂದಿದೆ.
ಈ ಪ್ರಶಸ್ತಿ ಪ್ರದಾನ ಸಮಾರಂಭವು ನವೆಂಬರ್ 8 ರಂದು ಅಪರಾಹ್ನ 3 ಗಂಟೆಗೆ ಮಂಗಳೂರು ನಗರದ ಡಾನ್ ಬಾಸ್ಕೋ ಹಾಲ್ನಲ್ಲಿ ನಡೆಯಲಿದೆ. ಈ ಕುರಿತು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷರಾದ ಎಸ್. ಪ್ರದೀಪ ಕುಮಾರ ಕಲ್ಕೂರ ಅವರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









