ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ (DKWJA) 2025-28ರ ಸಾಲಿಗಾಗಿ ನಡೆದ ಚುನಾವಣೆಯಲ್ಲಿ, ವಾರ್ತಾಭಾರತಿ ಪತ್ರಿಕೆಯ ಮಂಗಳೂರು ಬ್ಯೂರೋ ಚೀಫ್ ಆಗಿರುವ ಪುಷ್ಪರಾಜ್ ಬಿ.ಎನ್. ಅವರು ನೂತನ ಅಧ್ಯಕ್ಷರಾಗಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಜಿಲ್ಲಾ ವಾರ್ತಾ ಇಲಾಖೆಯ ಸಭಾಂಗಣದಲ್ಲಿ ರವಿವಾರ ನಡೆದ ಚುನಾವಣೆಯಲ್ಲಿ ಪುಷ್ಪರಾಜ್ ಅವರು ಒಟ್ಟು 187 ಮತಗಳನ್ನು ಪಡೆದು, ತಮ್ಮ ಪ್ರತಿಸ್ಪರ್ಧಿ, ವಿಜಯವಾಣಿ ವರದಿಗಾರ ಶ್ರವಣ್ ಕುಮಾರ್ ನಾಳ (144 ಮತಗಳು) ಅವರನ್ನು ಸೋಲಿಸಿ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದ್ದಾರೆ.
ಸುಮಾರು ಮೂರು ದಶಕಗಳ ಕಾಲ ಸಾರ್ವಜನಿಕ ಜೀವನದಲ್ಲಿ ಸಕ್ರಿಯರಾಗಿರುವ ಪುಷ್ಪರಾಜ್ ಅವರಿಗೆ ಇದು ದೊಡ್ಡ ಗೆಲುವಾಗಿದೆ. 1990-91ರಿಂದಲೇ ಸಾಕ್ಷರತಾ ಮತ್ತು ಶೈಕ್ಷಣಿಕ ಜಾಗೃತಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಅವರು, ಪುತ್ತೂರು ತಾಲೂಕು ಮತ್ತು ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಗಳಲ್ಲಿ ಸಕ್ರಿಯರಾಗಿದ್ದರು. ಈ ಹಿಂದೆ, ದ.ಕ. ಪತ್ರಕರ್ತರ ಸಂಘದಲ್ಲಿ ಕಾರ್ಯಕಾರಿ ಸಮಿತಿ ಸದಸ್ಯ ಮತ್ತು ಕೋಶಾಧಿಕಾರಿ ಸೇರಿದಂತೆ ಹಲವು ಮಹತ್ವದ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ.
ಇದೇ ವೇಳೆ, ಸಂಘದ ನಿಕಟಪೂರ್ವ ಅಧ್ಯಕ್ಷರಾಗಿದ್ದ ಶ್ರೀನಿವಾಸ ನಾಯಕ್ ಅವರು ರಾಜ್ಯ ಕಾರ್ಯಕಾರಣಿ ಸಮಿತಿಯ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಅವರು 204 ಮತಗಳನ್ನು ಗಳಿಸಿ, ಅನ್ಸಾರ್ ಇನೋಳಿ (124 ಮತಗಳು) ಅವರನ್ನು ಪರಾಭವಗೊಳಿಸಿದರು.
ಇನ್ನು, ಕೆಲವು ಪ್ರಮುಖ ಸ್ಥಾನಗಳಿಗೆ ಅವಿರೋಧ ಆಯ್ಕೆಗಳು ನಡೆದಿವೆ. ಅದರಂತೆ, ರಾಜೇಶ್ ಪೂಜಾರಿ ಅವರು ಪ್ರಧಾನ ಕಾರ್ಯದರ್ಶಿಯಾಗಿ ಮತ್ತು ವಿಜಯ ಕೋಟ್ಯಾನ್ ಅವರು ಕೋಶಾಧಿಕಾರಿಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇತರೆ ಪದಾಧಿಕಾರಿಗಳ ವಿವರ:
ಉಪಾಧ್ಯಕ್ಷರು: ಮುಹಮ್ಮದ್ ಆರೀಫ್, ವಿಲ್ಫ್ರೆಡ್ ಡಿ ಸೋಜ, ಮತ್ತು ರಾಜೇಶ್ ಶೆಟ್ಟಿ.
ಕಾರ್ಯದರ್ಶಿಗಳು: ಸತೀಶ್ ಇರಾ, ಸಿದ್ದೀಕ್ ನೀರಾಜೆ, ಮತ್ತು ಸುರೇಶ್ ಪಳ್ಳಿ.
ಕಾರ್ಯಕಾರಿ ಸಮಿತಿ ಸದಸ್ಯರಾಗಿ ಅಶೋಕ್ ಶೆಟ್ಟಿ ಬಿ.ಎನ್., ಸಂದೇಶ್ ಜಾರ, ಸಂದೀಪ್ ಕುಮಾರ್ ಎಂ, ಲಕ್ಷ್ಮೀನಾರಾಯಣ ರಾವ್, ಹರೀಶ್ ಮೋಟುಕಾನ, ದಿವಾಕರ ಪದ್ಮುಂಜ, ಕಿರಣ್ ಯು. ಸಿರ್ಸಿಕರ್, ಅಭಿಷೇಕ್ ಎಚ್.ಎಸ್., ಜಯಶ್ರೀ, ಭುವನೇಶ್ವರ ಜಿ, ಸಂದೀಪ್ ವಾಗ್ಲೆ, ಹರೀಶ್ ಕೆ.ಆದೂರ್, ಗಿರೀಶ್ ಅಡ್ಪಂಗಾಯ, ಸಂದೀಪ್ ಸಾಲ್ಯಾನ್, ಹಾಗೂ ಆರಿಫ್ ಕಲ್ಕಟ್ಟ ಅವರು ಆಯ್ಕೆಯಾಗಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಟಾಪ್ ಸುದ್ದಿ, ಪ್ರಾದೇಶಿಕ ಸುದ್ದಿಗಳು, ಸುದ್ದಿಗಳು









