ಕಾರ್ಕಳ : ಶಿರ್ಲಾಲಿನಲ್ಲಿ ಬಡ ಹೈನುಗಾರ್ತಿ ಮಹಿಳೆಗೆ ಮಾರಕ ಅಸ್ತ್ರ ತೋರಿಸಿ ದನ ಕಳ್ಳತನ, ನಲ್ಲೂರಿನಲ್ಲಿ ಅಕ್ರಮ ಕಸಾಯಿಖಾನೆ ಬಯಲಾಗಿರುವುದು, ತೆಳ್ಳಾರಿನಲ್ಲಿ ಕಾಡುಪ್ರಾಣಿ ಮಾಂಸ ಪತ್ತೆ ಇದೆಲ್ಲವೂ ರಾಜ್ಯದ ಕಾನೂನು-ಸುವ್ಯವಸ್ಥೆಯ ಕರಾಳ ಮುಖದ ನಿಜ ಸ್ವರೂಪ ಬಿಚ್ಚಿಟ್ಟಿದೆ ಎಂದು ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕ ವಿ. ಸುನಿಲ್ ಕುಮಾರ್ ಕಿಡಿಕಾರಿದ್ದಾರೆ.
ಈ ಎಲ್ಲ ಘಟನೆಗಳನ್ನು ತೀವೃವಾಗಿ ಖಂಡಿಸಿರುವ ಅವರು ಈ ಮೂರು ಪ್ರಕರಣ ಸಹಿತ ಇಂತಹ ಹಲವು ಪ್ರಕರಣಗಳ ಆರೋಪಿಗಳೆಲ್ಲರೂ ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಪರ ಕಾರ್ಯಕರ್ತರಾಗಿ ಕೆಲಸ ಮಾಡಿದವರು. ಕಾಂಗ್ರೆಸ್ ಈ ಅಕ್ರಮ ಗೋಹತ್ಯೆ ದಂಧೆಯ ಹಣವನ್ನು ಚುನಾವಣೆಗೆ ಬಳಸುತ್ತಿದೆ. ಈ ಆರೋಪಿಗಳಿಂದ ಕಾಂಗ್ರೆಸ್ ಚುನಾವಣಾ ಖಾತೆಗೆ ಭರಪೂರ ಹಣ ಹರಿಯುತ್ತಿದೆ ಎನ್ನುವ ಅನುಮಾನವಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಇದೆ, ರಕ್ಷಣೆ ನಿಲ್ಲುತ್ತದೆ ಎನ್ನುವ ಕಾರಣಕ್ಕೆ ಕಿಡಿಗೇಡಿಗಳು ಯಾವುದೇ ಭಯವಿಲ್ಲದೆ ನಿರಂತರ ಅಪರಾಧ ಕೃತ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಇದೇ ಕಾರಣದಿಂದ ಮನೆಮನೆಗಳಲ್ಲಿ ಗೋ ಕಳ್ಳತನ, ಗೋವಧೆ ಹಾಗೂ ಪ್ರಾಣಿ ವಧೆ ಮುಲಾಜಿಲ್ಲದೆ ನಡೆಯುತ್ತಿದೆ. ಹಟ್ಟಿಯಲ್ಲಿರುವ ಗೋವುಗಳಷ್ಟೆ ಅಲ್ಲದೆ ಇವರುಗಳ ವಕ್ರ ದೃಷ್ಟಿ ಅಮಾಯಕ ಕಾಡುಪ್ರಾಣಿಗಳ ಕಡೆಗೂ ಹರಿದಿದೆ. ಕಾಂಗ್ರೆಸ್ ಸರಕಾರವೇ ಇವರನ್ನು ಪೋಷಿಸುತ್ತಿದೆಯೇ?
ಕಾಂಗ್ರೆಸ್ ಹಾಗೂ ಸ್ಥಳಿಯ ಕಾಂಗ್ರೆಸ್ ನಾಯಕರ ಬೆಂಬಲ ಇಲ್ಲದೆ ಇಂತಹ ದಂಧೆ ಸಾಧ್ಯವೇ?” ಎಂದು ಪ್ರಶ್ನಿಸಿರುವ ಅವರು, “ಸರಕಾರ ಮತ್ತು ಜಿಲ್ಲಾಡಳಿತ ಇಂತಹ ಕೃತ್ಯದಲ್ಲಿ ತೊಡಗಿಸಿಕೊಂಡವರ ಮಟ್ಟ ಹಾಕಬೇಕು, ಅಪರಾಧಿಗಳ ವಿರುದ್ಧ ತಕ್ಷಣ ಕಠಿಣ ಕ್ರಮ ಜರುಗಿಸಬೇಕು. ಇಲ್ಲದಿದ್ದರೆ ಬಿಜೆಪಿ ದೊಡ್ಡ ಪ್ರಮಾಣದ ಹೋರಾಟಕ್ಕೆ ಮುಂದಾಗಲಿದೆ ಎಂದು ಎಚ್ಚರಿಕೆ ನೀಡಿದರು.
ನಲ್ಲೂರು ಅಕ್ರಮ ಗೋ ಹತ್ಯೆಯ ಪ್ರಕರಣದಲ್ಲಿ ರಾಜಕೀಯ ಒತ್ತಡಕ್ಕೆ ಮಣಿಯದೆ ಪೋಲಿಸ್ ಇಲಾಖೆ ಆರೋಪಿಗಳ ಹೆಡೆಮುರಿಕಟ್ಟಿ – ನವೀನ್ ನಾಯಕ್ ಬಿಜೆಪಿ ಕ್ಷೇತ್ರಾಧ್ಯಕ್ಷರು
ನಲ್ಲೂರಿನ ಪರಿಸರದಲ್ಲಿ ನಡೆದಿರುವ ಅಕ್ರಮ ಹಾಗೂ ವ್ಯವಸ್ಥಿತ ಗೋ ಹತ್ಯೆ ದಂಧೆಯ ಆರೋಪಿಗಳನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆಯನ್ನು ವಿಧಿಸುವಂತೆ ಪೊಲೀಸ್ ಇಲಾಖೆಯನ್ನು ಒತ್ತಾಯಿಸುತ್ತೇನೆ
ಪ್ರತಿ ಬಾರಿ ಗೋ ರಕ್ಷಣೆಯ ಕಾರ್ಯ ಮಾಡುವ ಹಿಂದೂ ಸಂಘಟನೆಗಳ ಕಾರ್ಯಕರ್ತರ ಮೇಲೆಯೇ ಪ್ರಕರಣ ದಾಖಲಿಸಲಾಗುತ್ತದೆ. ಆದರೆ ವಾಸ್ತವದಲ್ಲಿ, ಇಂತಹ ಅಕ್ರಮ ಗೋ ಹತ್ಯೆ ದಂಧೆಗಳನ್ನು, ಅಕ್ರಮ ಕಸಾಯಿಖಾನೆಗಳನ್ನು ಪತ್ತೆ ಹಚ್ಚಿ ಬಯಲು ಮಾಡುವುದು ನಮ್ಮ ಹಿಂದೂ ಕಾರ್ಯಕರ್ತರೇ ಎನ್ನುವುದನ್ನು ನಾವು ಗಮನಿಸಬೇಕಾದ ಅಂಶ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿದೆ ಎನ್ನುವ ಭರವಸೆಯಿಂದ, ಆರೋಪಿಗಳು ಕಾನೂನಿನ ಭಯುವಿಲ್ಲದೆ ಇಷ್ಟು ರಾಜಾರೋಷವಾಗಿ ತನ್ನ ಮನೆಯಲ್ಲಿಯೇ ಅಕ್ರಮ ಗೋ ಮಾಂಸ ವ್ಯಾಪಾರ ಮಾಡುವ ದಂಧೆಯನ್ನು ನಡೆಸಿಕೊಡಿದ್ದರು. ಇಂತಹ ಅಕ್ರಮ ಗೋ ಮಾಂಸ ದಂಧೆಗಳಿಂದಲೇ ಗೋ ಕಳ್ಳತನ ಎಗ್ಗಿಲ್ಲದೆ ನಡೆಯುತ್ತಿರುವುದು. ಇಂತಹ ಅಕ್ರಮ ದಂಧೆಗಳನ್ನು ಮಟ್ಟಹಾಕಿದರೆ ಗೋ ಕಳ್ಳತನವು ತನ್ನಿಂದ ತಾನೇ ನಿಯಂತ್ರಣಕ್ಕೆ ಬರುತ್ತದೆ.
ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೆ ಆರೋಪಿಗಳ ಹೆಡೆಮುರಿಕಟ್ಟಿ, ಪೊಲೀಸ್ ಇಲಾಖೆ ಇನ್ನಷ್ಟು ಚುರುಕಾಗಿ ಕಾರ್ಕಳದಾದ್ಯಂತ ಇರುವ ಅಕ್ರಮ ಕಸಾಯಿಖಾನೆಗಳನ್ನು ಶೀಘ್ರವೇ ಪತ್ತೆ ಹಚ್ಚಿ ಅಕ್ರಮ ದಂಧೆ ಕೋರರನ್ನು ಬಂಧಿಸಿ, ಅಕ್ರಮ ಕಸಾಯಿಖಾನೆಗಳನ್ನು ವಶಕ್ಕೆ ಪಡೆದು ಆರೋಪಿಗಳ ಆಸ್ತಿಯನ್ನು ಮುಟ್ಟುಗೋಲು ಹಾಕಬೇಕು ಎಂದು ಒತ್ತಾಯಿಸುತ್ತೇನೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಟಾಪ್ ಸುದ್ದಿ, ಪ್ರಾದೇಶಿಕ ಸುದ್ದಿಗಳು, ಸುದ್ದಿಗಳು









