ಕಾಪು : ಭಾನುವಾರ, ಕಾಪು ಸಮೀಪದ ಕೋತಲ್ಕಟ್ಟೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗೂಡ್ಸ್ ಟೆಂಪೋವೊಂದು ಪಲ್ಟಿಯಾದ ಪರಿಣಾಮ ಭೀಕರ ಅಪಘಾತ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಐವರು ಕಾರ್ಮಿಕರು ಮೃತಪಟ್ಟಿದ್ದು, ಇನ್ನೂ ಹಲವು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ.
ಅಪಘಾತಕ್ಕೆ ಕಾರಣ
ಕಾಪು ಮಜೂರಿನಿಂದ ಮಲ್ಪೆಯತ್ತ ಡೆಕೋರೇಶನ್ ಸಂಬಂಧಿಸಿದ ಸಲಕರಣೆಗಳನ್ನು ಸಾಗಿಸುತ್ತಿದ್ದ ಟೆಂಪೋ ಇದಾಗಿದೆ. ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ವಾಹನವು ಡಿವೈಡರ್ಗೆ ಏರಿ ರಸ್ತೆಯಲ್ಲೇ ಪಲ್ಟಿಯಾಗಿದೆ.
ಮೃತರ ಮತ್ತು ಗಾಯಾಳುಗಳ ಸಂಖ್ಯೆ
ದುರ್ಘಟನೆ ಸಂಭವಿಸಿದ ಸಂದರ್ಭದಲ್ಲಿ ವಾಹನದಲ್ಲಿ ಒಟ್ಟು ಒಂಬತ್ತು ಮಂದಿ ಕೆಲಸಗಾರರು ಇದ್ದರು. ದುರಂತದಲ್ಲಿ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವಿಗೀಡಾಗಿದ್ದು, ಉಳಿದವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಇನ್ನೂ ಮೂವರು ಮೃತಪಟ್ಟಿದ್ದಾರೆ. ಒಟ್ಟಾರೆ ಐವರು ದುರ್ಮರಣಕ್ಕೀಡಾಗಿದ್ದಾರೆ. ಗಾಯಗೊಂಡವರಲ್ಲಿ ಹಲವು ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಪೊಲೀಸ್ ಕ್ರಮ
ಈ ಭೀಕರ ಅಪಘಾತದ ಮಾಹಿತಿ ತಿಳಿದ ಕೂಡಲೇ ಕಾಪು ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









