ಮಂಗಳೂರು : ನಗರದ ಹೊರವಲಯದ ಪಡೀಲ್ನಲ್ಲಿ ನೂತನ ಜಿಲ್ಲಾಧಿಕಾರಿ ಕಚೇರಿ ಕಾರ್ಯ ನಿರ್ವಹಿಸುತ್ತಿದ್ದರೂ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರು ವಾರದಲ್ಲೊಂದು ದಿನ ಹಳೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಾರೆ.
ಜಿಲ್ಲಾಧಿಕಾರಿ ಕಚೇರಿ ಸ್ಥಳಾಂತರ ಆದ ಬಳಿಕ ಹಳೆ ಡಿಸಿ ಕಚೇರಿ ಬರಿದಾಗಿ ಒಂದೆರಡು ಕಡೆ ಗಾಜು ಒಡೆದಿದ್ದು, ‘ಬಾಟಲಿ’ಗಳು ಒಳಬರುವುದು ಕಂಡುಬಂದಿದೆ. ಅಲ್ಲದೆ ಹಳೆ ಡಿಸಿ ಕಚೇರಿ ಸುಸ್ಥಿತಿಯಲ್ಲಿರುವುದನ್ನೂ ನೋಡಿಕೊಳ್ಳಬೇಕಾಗಿತ್ತು. ಹೀಗಾಗಿ ವಾರದಲ್ಲೊಂದು ದಿನ ಅಲ್ಲಿ ಕರ್ತವ್ಯ ನಿರ್ವಹಿಸುತ್ತಿರುವುದಾಗಿ ಜಿಲ್ಲಾಧಿಕಾರಿ ಹೇಳಿದರು.
ಹಳೆ ಡಿಸಿ ಕಚೇರಿಯಲ್ಲಿ ಎಸ್ಎಎಫ್ ಪಡೆ ಕಚೇರಿಗೆ ಸ್ಥಳಾವಕಾಶ ನೀಡಲಾಗಿದೆ. ಉಳಿದಂತೆ ರಾ.ಹೆದ್ದಾರಿ, ಕಾರ್ಮಿಕ ಇಲಾಖೆಯವರು ಸ್ಥಳಾವಕಾಶ ಕೇಳುತ್ತಿದ್ದು, ಈ ನಿಟ್ಟಿನಲ್ಲಿ ಪರಿಶೀಲನೆ ನಡೆದಿದೆ ಎಂದರು.
ವಿಡಿಯೋ
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









