ಮೂಡುಬಿದಿರೆ: ಚಾಲಕನ ಅಜಾಗರೂಕತೆಯ ಚಾಲನೆಗೆ 13 ವರ್ಷದ ಶಾಲಾ ಬಾಲಕನೊಬ್ಬ ಬಲಿಯಾದ ದಾರುಣ ಘಟನೆ ಬುಧವಾರ ಮಧ್ಯಾಹ್ನ ಮಾರೂರು ಹೊಸಂಗಡಿ ಎಂಬಲ್ಲಿ ಸಂಭವಿಸಿದೆ. ಹೊಸಂಗಡಿ ನಿವಾಸಿ ನಝೀರ್ ಎಂಬವರ ಪುತ್ರ ಝಾಹಿರ್ (13) ಮೃತಪಟ್ಟ ದುರ್ದೈವಿ. ಈತ ಸ್ಥಳೀಯ ಶಾಲೆಯಲ್ಲಿ ಏಳನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು.
ತಾಯಿಯ ಕಣ್ಣೆದುರೇ ನಡೆದ ದುರಂತ: ಬುಧವಾರ ಮಧ್ಯಾಹ್ನ ಝಾಹಿರ್ ತನ್ನ ತಾಯಿಯೊಂದಿಗೆ ಅಂಗಡಿಗೆಂದು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದನು. ಈ ವೇಳೆ ಎದುರಿನಿಂದ ಅತಿ ವೇಗವಾಗಿ ಬಂದ ಕಾರೊಂದು ಬಾಲಕನಿಗೆ ಬಲವಾಗಿ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಗಂಭೀರವಾಗಿ ಗಾಯಗೊಂಡ ಬಾಲಕನನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅಷ್ಟರಲ್ಲೇ ಚಿಕಿತ್ಸೆ ಫಲಕಾರಿಯಾಗದೆ ಆತ ಕೊನೆಯುಸಿರೆಳೆದಿದ್ದಾನೆ.
ಪೊಲೀಸ್ ತನಿಖೆ: ಅಪಘಾತಕ್ಕೆ ಕಾರು ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ಹೇಳಲಾಗುತ್ತಿದ್ದು, ಈ ಕುರಿತು ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









