ಮಂಗಳೂರು : ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ (ರಿ.) ದ.ಕ. ಜಿಲ್ಲಾ ಸಮಿತಿ ಹಾಗೂ ದಾಸ್ ಚಾರಿಟೇಬಲ್ ಸೇವಾ ಟ್ರಸ್ಟ್ (ರಿ.) ಮಂಗಳೂರು ಸಹಯೋಗದಲ್ಲಿ ‘ಕುಂಭಕಲಾವಳಿ-ಕುಲಾಲ ಕಲಾ ಸೇವಾಂಜಲಿ’ ಅದ್ದೂರಿ ಕಾರ್ಯಕ್ರಮವು ಜನವರಿ 4ರಂದು ಮಂಗಳೂರು ಕುದ್ಮಲ್ ರಂಗರಾವ್ ಪುರಭವನದಲ್ಲಿ ಅದ್ದೂರಿಯಾಗಿ ನಡೆಯಲಿದೆ ಎಂದು ಸಂಘಟಕರಾದ ಅನಿಲ್ ದಾಸ್ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿಯನ್ನ ನೀಡಿದರು
ಕಾರ್ಯಕ್ರಮದಲ್ಲಿ ದ.ಕ. ಜಿಲ್ಲಾ ಪದಾಧಿಕಾರಿಗಳ ಪದಗ್ರಹಣ, ಸಭಾಕಾರ್ಯಕ್ರಮ, ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮ, ಸಾಧಕರಿಗೆ ಸನ್ಮಾನ ಹಾಗೂ ಆಶಕ್ತರಿಗೆ ನೆರವು ಮುಂತಾದ ಸಾಮಾಜಿಕ ಸೇವಾ ಚಟುವಟಿಕೆಗಳು ನಡೆಯಲಿದ್ದು, ರಾಜ್ಯದ ವಿವಿಧ ಭಾಗಗಳಿಂದ ಸಮುದಾಯದ ಸುಮಾರು 3000 ಮಂದಿ ಜನಸೇರುವ ನಿರೀಕ್ಷೆ ಇದೆ.
ಬೆಳಿಗ್ಗೆ 8-30ಕ್ಕೆ ವೈಷ್ಣವಿ ಕ್ಷೇತ್ರ ಮುಳಿಯದ ಶ್ರೀ ಶಿವಾನಂದ ಸರಸ್ವತೀ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ನಡುಬೊಟ್ಟು ಶ್ರೀ ಉದ್ಭವ ರೌದ್ರನಾಥೇಶ್ವರ ದೇವಸ್ಥಾನದ ಧರ್ಮದರ್ಶಿ ಡಾ. ರವಿ ಎನ್. ದೀಪ ಪ್ರಜ್ವಲನೆ ಮಾಡಲಿದ್ದಾರೆ. ಬೆಳಿಗ್ಗೆ 9-00 ಗಂಟೆಗೆ ನೂತನ ಪದಾಧಿಕಾರಿಗಳ ಪದಗ್ರಹಣ ನಡೆಯಲಿದ್ದು, ಬೆಳಿಗ್ಗೆ 9-30ಕ್ಕೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ. ಮೋಹನ್ ಆಳ್ವ ಅವರು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ ನೀಡಲಿದ್ದಾರೆ. ಈ ವೇಳೆ ಶ್ರೀ ಧಾಮ ಮಾಣಿಲದ ಯೋಗಿ ಕೌಸ್ತುಭ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಆಶೀರ್ವಚನ ನೀಡಲಿದ್ದು, ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ (ರಿ.) ಇದರ ಅಧ್ಯಕ್ಷರಾಗಿರುವ ಲ. ಅನಿಲ್ ದಾಸ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಬಳಿಕ ಮಧ್ಯಾಹ್ನ 12-00 ಗಂಟೆಗೆ ಸಭಾ ಕಾರ್ಯಕ್ರಮ, ಸಂಜೆ 5-30ಕ್ಕೆ ಸಮಾರೋಪ ಕಾರ್ಯಕ್ರಮ ನಡೆಯಲಿದೆ ಮತ್ತು ಇತರ ಮಾಹಿತಿಯನ್ನ ನೀಡಿದರು.
ಅನಿಲ್ ದಾಸ್ ಪತ್ರಿಕಾಗೋಷ್ಠಿ
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









