ಕಡಬ : ಕಡಬ ತಾಲೂಕಿನ ಕೊಯಿಲ ಗ್ರಾಮದ ನಿವಾಸಿಯೊಬ್ಬರು ತಮ್ಮ ಮೂರೂವರೆ ವರ್ಷದ ಮಗುವಿನೊಂದಿಗೆ ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ನಾಪತ್ತೆಯಾದವರನ್ನು ನೇಹಾ (26) ಮತ್ತು ಆಕೆಯ ಪುತ್ರ ಮಹಮ್ಮದ್ ನಿಹಾಲ್ ಎಂದು ಗುರುತಿಸಲಾಗಿದ್ದು, ಈ ಸಂಬಂಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುಮಾರು ಮೂರು ತಿಂಗಳ ಹಿಂದೆ ನೇಹಾ ಅವರು ಪತಿಯೊಂದಿಗೆ ಕೆಲಸಕ್ಕಾಗಿ ಬೆಂಗಳೂರಿಗೆ ತೆರಳಿದ್ದರು. ಕಳೆದ ಡಿಸೆಂಬರ್ 25 ರಂದು ಪತಿ ಊರಿಗೆ ಮರಳಿದ್ದರೂ, ನೇಹಾ ಅವರು ಮಗುವಿನೊಂದಿಗೆ ಮನೆಗೆ ಬಾರದೆ ಕಾಣೆಯಾಗಿದ್ದಾರೆ. ಪತಿ ಹಾಗೂ ಕುಟುಂಬಸ್ಥರು ಸಂಪರ್ಕಿಸಲು ಪ್ರಯತ್ನಿಸಿದರೂ ಅವರು ದೂರವಾಣಿ ಕರೆಗೆ ಸಿಗುತ್ತಿಲ್ಲ. ಸುಮಾರು 152 ಸೆಂ.ಮೀ ಎತ್ತರ, ಗೋಧಿ ಮೈಬಣ್ಣದ ನೇಹಾ ಅವರು ನಾಪತ್ತೆಯಾದ ಸಮಯದಲ್ಲಿ ಚೂಡಿದಾರ ಧರಿಸಿದ್ದರು. ಇವರು ಕನ್ನಡ, ಉರ್ದು ಮತ್ತು ಬ್ಯಾರಿ ಭಾಷೆಗಳನ್ನು ಮಾತನಾಡಬಲ್ಲವರಾಗಿದ್ದಾರೆ. ಇವರ ಪತ್ತೆಯಾದಲ್ಲಿ ತಕ್ಷಣ ಕಡಬ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









