ಮಂಗಳೂರು : ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕರಾದ ಡಾ. ಕೆ.ವಿ. ರಾವ್ ಅವರಿಗೆ ಭಾರತೀಯ ಭೌತಶಾಸ್ತ್ರ ಅಧ್ಯಾಪಕರ ಸಂಘವು (IAPT) ‘ಜೀವಮಾನ ಸಾಧನಾ ಪ್ರಶಸ್ತಿ’ಯನ್ನು ನೀಡಿ ಗೌರವಿಸಿದೆ. ವಿಜ್ಞಾನ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಅವರು ಸಲ್ಲಿಸಿದ ಸುದೀರ್ಘ ಹಾಗೂ ಅನುಪಮ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ.
ಬೆಂಗಳೂರಿನ ಆರ್.ವಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ‘ಕ್ವಾಂಟಂ ವಿಜ್ಞಾನ ಮತ್ತು ತಂತ್ರಜ್ಞಾನ’ ರಾಷ್ಟ್ರೀಯ ಸಮ್ಮೇಳನದಲ್ಲಿ ಈ ಗೌರವ ಸಮರ್ಪಣೆ ನಡೆಯಿತು. ಡಾ. ರಾವ್ ಅವರು ತಮ್ಮ ವೃತ್ತಿಜೀವನದುದ್ದಕ್ಕೂ ವಿವಿಧ ಜವಾಬ್ದಾರಿಯುತ ಸ್ಥಾನಗಳನ್ನು ಅಲಂಕರಿಸಿದ್ದು, ವಿಜ್ಞಾನ ಸಂವಹನದ ವಿವಿಧ ಆಯಾಮಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಅವರು ಕರ್ತವ್ಯ ನಿರ್ವಹಿಸಿದ ಎಲ್ಲಾ ಶೈಕ್ಷಣಿಕ ಕ್ಷೇತ್ರಗಳಲ್ಲಿ ವಿಜ್ಞಾನದ ಜನಪ್ರಿಯತೆಗಾಗಿ ಶ್ರಮಿಸಿರುವುದನ್ನು ಪ್ರಶಸ್ತಿ ಪತ್ರದಲ್ಲಿ ವಿಶೇಷವಾಗಿ ಶ್ಲಾಘಿಸಲಾಗಿದೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಟಾಪ್ ಸುದ್ದಿ, ಪ್ರಾದೇಶಿಕ ಸುದ್ದಿಗಳು, ಸುದ್ದಿಗಳು









