ಉಡುಪಿ : ಜಿಲ್ಲೆಯ ಕಾಪು ತಾಲೂಕಿನ ಹೆಜಮಾಡಿ ಟೋಲ್ ಗೇಟ್ ಬಳಿ ಪ್ರವಾಸಕ್ಕೆ ಬಂದಿದ್ದ ಕೇರಳದ ವಿದ್ಯಾರ್ಥಿಗಳು ನಡುರಸ್ತೆಯಲ್ಲೇ ಪಟಾಕಿ ಸಿಡಿಸಿ ಹುಚ್ಚಾಟ ಮೆರೆದಿದ್ದಾರೆ. ಕೇರಳದಿಂದ ಉಡುಪಿ ಕಡೆಗೆ ಎರಡು ಬಸ್ಗಳಲ್ಲಿ ಪ್ರವಾಸಕ್ಕೆಂದು ಆಗಮಿಸಿದ್ದ ಈ ವಿದ್ಯಾರ್ಥಿಗಳ ತಂಡ, ಟೋಲ್ ಪ್ಲಾಜಾ ಸಮೀಪ ವಾಹನಗಳನ್ನು ನಿಲ್ಲಿಸಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ವರ್ತಿಸಿದೆ. ರಸ್ತೆಯ ಮಧ್ಯೆಯೇ ಕುಣಿದು ಕುಪ್ಪಳಿಸುತ್ತಾ, ಪಟಾಕಿ ಸಿಡಿಸಿ ಸಂಚಾರಕ್ಕೆ ಅಡ್ಡಿಪಡಿಸಿದ ಈ ದೃಶ್ಯಗಳು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿವೆ.
ಟೋಲ್ ಗೇಟ್ನಂತಹ ಸೂಕ್ಷ್ಮ ಪ್ರದೇಶದಲ್ಲಿ ಯಾವುದೇ ಮುನ್ನೆಚ್ಚರಿಕೆ ಇಲ್ಲದೆ ವಿದ್ಯಾರ್ಥಿಗಳು ನಡೆಸಿದ ಈ ರಂಪಾಟ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಪ್ರವಾಸದ ಭರದಲ್ಲಿ ಸಂಚಾರ ನಿಯಮಗಳನ್ನು ಗಾಳಿಗೆ ತೂರಿ, ಸಾರ್ವಜನಿಕ ಶಾಂತಿಗೆ ಭಂಗ ತಂದಿರುವ ವಿದ್ಯಾರ್ಥಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ. ಈ ಪುಂಡಾಟದ ವಿಡಿಯೋ ಆಧರಿಸಿ ಪೊಲೀಸರು ಮುಂದಿನ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.
ವಿಡಿಯೋ
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









