ಮಂಗಳೂರು : ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ವಂಚನೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕಳೆದ ಏಳು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಕೇರಳದ ಕೊಲ್ಲಂ ನಿವಾಸಿ ಜಯಚಂದ್ರ (66) ಬಂಧಿತ ಆರೋಪಿಯಾಗಿದ್ದಾನೆ. 2019ರಲ್ಲಿ ಈತನ ವಿರುದ್ಧ ವಂಚನೆ ಪ್ರಕರಣ ದಾಖಲಾದ ದಿನದಿಂದಲೂ ಆತ ಪೊಲೀಸರಿಗೆ ಸಿಗದೆ ನಾಪತ್ತೆಯಾಗಿದ್ದನು. ನ್ಯಾಯಾಲಯದ ವಿಚಾರಣೆಯಿಂದ ಸತತವಾಗಿ ತಪ್ಪಿಸಿಕೊಳ್ಳುತ್ತಿದ್ದ ಕಾರಣ ಈತನ ವಿರುದ್ಧ ನ್ಯಾಯಾಂಗ ಬಂಧನದ ವಾರಂಟ್ ಜಾರಿಯಾಗಿತ್ತು.
ಆರೋಪಿ ಪತ್ತೆಯಾಗದ ಹಿನ್ನೆಲೆಯಲ್ಲಿ ಪೊಲೀಸರು ಈ ಹಿಂದೆ ನ್ಯಾಯಾಲಯಕ್ಕೆ ‘ತಲೆಮರೆಸಿಕೊಂಡಿರುವ ಆರೋಪಿ’ ಎಂದು ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದರು. ಆದರೆ, ಇತ್ತೀಚೆಗೆ ಆರೋಪಿಯ ಅಡಗುತಾಣದ ಬಗ್ಗೆ ಖಚಿತ ಮಾಹಿತಿ ಸಂಗ್ರಹಿಸಿದ ಕಂಕನಾಡಿ ನಗರ ಪೊಲೀಸ್ ಸಿಬ್ಬಂದಿಗಳಾದ ಬಾಲರಾಜ್ ಮತ್ತು ರವಿಕುಮಾರ್ ಅವರು ಕಾರ್ಯಾಚರಣೆ ಕೈಗೊಂಡಿದ್ದಾರೆ. ಕೇರಳದ ಕೊಲ್ಲಂ ನಗರದ ವಟ್ಟಕುಟ್ಟು ಲಲಿತಾ ಮಂದಿರದಲ್ಲಿರುವ ಆತನ ನಿವಾಸಕ್ಕೆ ತೆರಳಿ ಫೆಬ್ರವರಿ 3ರಂದು ಆತನನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









